ADVERTISEMENT

ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ: ಸಚಿವ ಸಂತೋಷ ಲಾಡ್ ಖಂಡನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 15:45 IST
Last Updated 20 ಜನವರಿ 2025, 15:45 IST
<div class="paragraphs"><p>ಸಂತೋಷ ಲಾಡ್</p></div>

ಸಂತೋಷ ಲಾಡ್

   

ರಾಯಚೂರು: ‘ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಮಾನವೀಯ. ಸರ್ಕಾರ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕ್ರಮ ಕೈಗೊಳ್ಳಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.

ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ನಾಗರಿಕ ಸಮಾಜದಲ್ಲಿ ಬದುಕುವವರೆಲ್ಲರೂ ಬೆಚ್ಚಿ ಬೀಳುವಂತಹದ್ದು. ಮಾಲೀಕರಿಗೆ ಕಾರ್ಮಿಕರ ಬಗ್ಗೆ ಕಾಳಜಿ ಇರಬೇಕು. ಮನುಷ್ಯತ್ವ ಇಲ್ಲದವರೇ ಇಂತಹ ಕೃತ್ಯ ಎಸಗುತ್ತಾರೆ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

ADVERTISEMENT

‘ದೇಶದಲ್ಲಿ ಕಾಯ್ದೆ,ಕಾನೂನುಗಳಿದ್ದರೆ ಅಪರಾಧ ಚಟುವಟಿಕೆಗಳು ಕಡಿಮೆಯಾಗುತ್ತಿಲ್ಲ ಎಂದರೆ ಜನರಿಗೆ ಕಾನೂನುಗಳ ಬಗ್ಗೆ ಅರಿವಿಲ್ಲ ಎಂದರ್ಥವಲ್ಲ. ಜನರಿಗೆ ಮಾನವೀಯತೆ ಇರಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.