ADVERTISEMENT

ಮಾನ್ವಿಯಲ್ಲಿ ಸವಿತಾ ಮಹರ್ಷಿ ಜಯಂತಿ ಅಚರಣೆ: ಶಿಕ್ಷಣಕ್ಕೆ ಆದ್ಯತೆ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2023, 6:12 IST
Last Updated 1 ಫೆಬ್ರುವರಿ 2023, 6:12 IST
ಮಾನ್ವಿಯಲ್ಲಿ ಮಂಗಳವಾರ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಡೆಯಿತು
ಮಾನ್ವಿಯಲ್ಲಿ ಮಂಗಳವಾರ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಡೆಯಿತು   

ಮಾನ್ವಿ: ‘ಹಿಂದುಳಿದ ಸವಿತಾ ಸಮಾಜದವರು ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಏಳಿಗೆ ಹೊಂದ ಬೇಕು’ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಪಟ್ಟಣದ ಸವಿತಾ ಕಾಲೊನಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸವಿತಾ ಸಮಾಜ ಬಾಂಧವರು ಸಂಘಟಿತರಾಗಿ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಸವಿತಾ ಮಹರ್ಷಿಯ ತತ್ವಾದರ್ಶಗಳ ಪಾಲನೆ ಮಾಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಸವಿತಾ ಸಮಾಜದ ಮುಖಂಡ ಶ್ರೀನಿವಾಸ ನಾಗಲದಿನ್ನಿ ಅವರು ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ತಹಶೀಲ್ದಾರ್ ಚಂದ್ರಕಾಂತ, ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹೀದ್, ಪುರಸಭೆ ಸದಸ್ಯರಾದ ಹುಸೇನ್ ಬಾಷಾ ಹಾಗೂ ಬಸವರಾಜ ಭಜಂತ್ರಿ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ, ಶಿಕ್ಷಣ ಇಲಾಖೆಯ ಅಧಿಕಾರಿ ಸಿದ್ದಲಿಂಗಯ್ಯ ಇದ್ದರು.

ಮೆರವಣಿಗೆ: ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಬಸವ ವೃತ್ತದಿಂದ ಸವಿತಾ ಸಮಾಜದ ಕಾಲೊನಿವರೆಗೆ ಸವಿತಾ ಮಹರ್ಷಿ ಭಾವಚಿತ್ರ ಮೆರವಣಿಗೆ ನಡೆಯಿತು. ಮಾಜಿ ಶಾಸಕ ಜಿ.ಹಂಪಯ್ಯ ನಾಯಕ, ಮುಖಂಡರಾದ ರಾಜಾ ರಾಮಚಂದ್ರ ನಾಯಕ, ಶರಣಯ್ಯ ಕೆ.ಗುಡದಿನ್ನಿ, ಸವಿತಾ ಸಮಾಜದ ಅಧ್ಯಕ್ಷ ರಾಘವೇಂದ್ರ ಉಂದ್ಯಾಲ, ಜಿ.ಉಮಾಪತಿ ಹಾಗೂ ಇತರ ಪದಾಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.