ಮಸ್ಕಿ: ‘ಪರಿಶಿಷ್ಟರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಕೆ ಮಾಡಿಕೊಳ್ಳುತ್ತಿದೆ. ಇದು ಖಂಡನೀಯ. ಕೂಡಲೇ ಅನುದಾನ ವಾಪಸ್ ನೀಡಬೇಕು’ ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ತಾಲ್ಲೂಕು ಘಟಕದ ಪದಾಧಿಕಾರಿಗಳು ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಇದರ ಹಿಂದೆ ಪರಿಶಿಷ್ಟರನ್ನು ಶಿಕ್ಷಣದಿಂದ ದೂರವಿಡುವ ಹುನ್ನಾರ ಅಡಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನ ಕಡಿತಗೊಳಿಸಿದ್ದು ಖಂಡನಿಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ದಲಿತ ವಿದ್ಯಾರ್ಥಿ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಮೌನೇಶ ತುಗ್ಗಲದಿನ್ನಿ ಉಪ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹುಸೇನಪ್ಪ ಇರಕಲ್, ಅಮರೇಶ ಭೋವಿ, ಶರಣಪ್ಪ ದೀನಸಮುದ್ರ, ಹುಚ್ಚಪ್ಪ ನಾಯಕ, ರಮೇಶ ನಂಜಲದಿನ್ನಿ, ಮರಿಗೌಡ ತುಗ್ಗಲದಿನ್ನಿ, ಸಿದ್ದಪ್ಪ ದೀನಸಮುದ್ರ ಹಾಗೂ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.