ADVERTISEMENT

ರಾಯಚೂರು: ಎಸ್‌ಸಿ, ಎಸ್‌ಟಿ ಕುಂದು ಕೊರತೆ ಸಭೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 11:47 IST
Last Updated 25 ಜುಲೈ 2020, 11:47 IST
ರಾಯಚೂರಿನ ಹಳೆ ಆಶ್ರಯ ಕಾಲೋನಿಯಲ್ಲಿ ಶನಿವಾರ ನಡೆದ ಎಸ್‌ಸಿ,ಎಸ್‌ಟಿ ಕುಂದು ಕೊರತೆಗಳ ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ನಾಗರ ಪಂಚಮಿ ನಿಮಿತ್ತ ಮಕ್ಕಳಿಗೆ ಹಣ್ಣು ವಿತರಿಸಿದರು
ರಾಯಚೂರಿನ ಹಳೆ ಆಶ್ರಯ ಕಾಲೋನಿಯಲ್ಲಿ ಶನಿವಾರ ನಡೆದ ಎಸ್‌ಸಿ,ಎಸ್‌ಟಿ ಕುಂದು ಕೊರತೆಗಳ ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ನಾಗರ ಪಂಚಮಿ ನಿಮಿತ್ತ ಮಕ್ಕಳಿಗೆ ಹಣ್ಣು ವಿತರಿಸಿದರು   

ರಾಯಚೂರು:ನಗರದ ಹಳೆ ಆಶ್ರಯ ಕಾಲೋನಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರ ನೇತೃತ್ವದಲ್ಲಿ ಎಸ್‌ಸಿ,ಎಸ್‌ಟಿ ಕುಂದು ಕೊರತೆಗಳ ಸಭೆ ಶನಿವಾರ ನಡೆಯಿತು.

ಬಡಾವಣೆಯ ಜನರ ಕುಂದು ಕೊರತೆಗಳನ್ನು ಆಲಿಸಿ,ಸಮಸ್ಯೆಗಳನ್ನು ಪರಿಹರಿಸಲು ಭರವಸೆಯನ್ನು ನೀಡಿದರು. ನಾಗರ ಪಂಚಮಿ ಹಬ್ಬದ ನಿಮಿತ್ತ ಮಹಿಳೆಯರಿಗೆ,ಮಕ್ಕಳಿಗೆ ಬಾಳೆಹಣ್ಣು,ಹಾಲು,ಗಿಡ,ಸಿಹಿ ವಿತರಿಸುವ ಮೂಲಕ ನಾಗರ ಪಂಚಮಿಯ ಶುಭಾಶಯ ಕೋರಿದರು.

ಕೊರೊನಾ ಸೋಂಕು ನಿಯಂತ್ರಣ ಮಾಡಲು ತಾವೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಂಡು, ಮೇಲಿಂದಮೇಲೆ ಕೈಗಳನ್ನು ಸ್ವಚ್ಚವಾಗಿ ತೊಳೆದು ಕೊಳ್ಳಬೇಕು ಎಂದು ಜಾಗೃತಿ ಮೂಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.