ADVERTISEMENT

ಶಾಲಾ ವಾಹನಕ್ಕೆ ಟಾಟಾ ಏಸ್‌ ಡಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 7:40 IST
Last Updated 18 ನವೆಂಬರ್ 2025, 7:40 IST
ಮುದಗಲ್ ಸಮೀಪದ ಕೆ.ಮರಿಯಮ್ಮನಹಳ್ಳಿ ಹತ್ತಿರ ಸಂಭವಿಸಿದ ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಶಾಲಾ ವಾಹನ
ಮುದಗಲ್ ಸಮೀಪದ ಕೆ.ಮರಿಯಮ್ಮನಹಳ್ಳಿ ಹತ್ತಿರ ಸಂಭವಿಸಿದ ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಶಾಲಾ ವಾಹನ   

ಮುದಗಲ್: ಸಮೀಪದ ಕೆ.ಮರಿಯಮ್ಮನಹಳ್ಳಿ ಬಳಿ ಜೆಎಂಜೆ ಶಾಲೆಯ ವಾಹನಕ್ಕೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಎಂಟು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಶಾಲಾ ವಾಹನ ಕೆ.ಮರಿಯಮ್ಮನಹಳ್ಳಿಯಿಂದ ಮುದಗಲ್ ಪಟ್ಟಣಕ್ಕೆ ಬರುತ್ತಿತ್ತು. ಈ ವೇಳೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಅಬ್ರಹಾಂ ಚಾಂದಾ ಪಾಷಾ, ಇಮ್ರಾನ್ ಚಾಂದಾ ಪಾಷಾ, ಸಬಾ ಮುದಗಲ್, ಶ್ರೀನಿವಾಸ ರಾಮಣ್ಣ ಉಪ್ಪಾರ ಎಂಬ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಮುದಗಲ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಮೂವರು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.