ADVERTISEMENT

ಸಿಂಧನೂರು: ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 4:31 IST
Last Updated 17 ಮೇ 2022, 4:31 IST
ಸಿಂಧನೂರಿನ ಟಿಬಿಪಿ ಕ್ಯಾಂಪಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಕಲಿಕಾ ಚೇತರಿಗೆ, ಪಠ್ಯಪುಸ್ತಕ ವಿತರಣೆ, ಕಾಮನಬಿಲ್ಲು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಶಾಸಕ ವೆಂಕಟರಾವ್ ನಾಡಗೌಡ ಉದ್ಘಾಟಿಸಿದರು
ಸಿಂಧನೂರಿನ ಟಿಬಿಪಿ ಕ್ಯಾಂಪಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ, ಕಲಿಕಾ ಚೇತರಿಗೆ, ಪಠ್ಯಪುಸ್ತಕ ವಿತರಣೆ, ಕಾಮನಬಿಲ್ಲು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಶಾಸಕ ವೆಂಕಟರಾವ್ ನಾಡಗೌಡ ಉದ್ಘಾಟಿಸಿದರು   

ಸಿಂಧನೂರು: ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ನೆರವಾಗಲಿದೆ ಎಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು.

ನಗರದ ಟಿಬಿಪಿ ಕ್ಯಾಂಪಿನ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ, ಕಲಿಕಾ ಚೇತರಿಗೆ, ಪಠ್ಯಪುಸ್ತಕ ವಿತರಣೆ, ಕಾಮನಬಿಲ್ಲು ಕ್ರೀಡಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ವೇಳೆ ಬೌತಿಕ ತರಗತಿಗಳು ನಡೆಯಲಿಲ್ಲ. ಸರ್ಕಾರ ಎಷ್ಟೇ ಪ್ರಯತ್ನಿಸಿದ್ದರೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಹಾಗಾಗಿ, ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರಸಕ್ತ ವರ್ಷದ ಪಠ್ಯದ ಜತೆಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಆಯೋಜಿಸಿದ್ದು ಸ್ವಾಗತಾರ್ಹ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಶರಣಪ್ಪ ವಟಗಲ್ ಮಾತನಾಡಿದರು. ಎಸ್‍ಡಿಎಂಸಿ ಅಧ್ಯಕ್ಷ ರಂಜಾನ್‍ ಪಾಷಾ ಅಧ್ಯಕ್ಷತೆ ವಹಿಸಿದ್ದರು. ಬಿಆರ್‌ಸಿ ವೈ ಕೃಷ್ಣಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗದ್, ದೈಹಿಕ ಶಿಕ್ಷಣ ಪರಿವೀಕ್ಷಕ ಮುಕ್ಕಣ್ಣ ಕರಿಗಾರ, ಮುಖ್ಯಶಿಕ್ಷಕ ಭಾಗ್ಯಶ್ರೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.