ADVERTISEMENT

ಡಿಸ್ಕ್ ಥ್ರೋ ರಾಜ್ಯ ಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 14:03 IST
Last Updated 8 ನವೆಂಬರ್ 2019, 14:03 IST
ಡಿಸ್ಕ್‌ ಥ್ರೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಾಯಚೂರಿನ ಟ್ಯಾಗೋರ್ ಸ್ಮಾರಕ ಪ್ರೌಢಶಾಲೆ ವಿದ್ಯಾರ್ಥಿಗಳು, ಮಾರ್ಗದರ್ಶಕರೊಂದಿಗೆ
ಡಿಸ್ಕ್‌ ಥ್ರೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಾಯಚೂರಿನ ಟ್ಯಾಗೋರ್ ಸ್ಮಾರಕ ಪ್ರೌಢಶಾಲೆ ವಿದ್ಯಾರ್ಥಿಗಳು, ಮಾರ್ಗದರ್ಶಕರೊಂದಿಗೆ   

ರಾಯಚೂರು: ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಹಟ್ಟಿಯಲ್ಲಿ ಈಚೆಗೆ ಜಿಲ್ಲಾಮಟ್ಟದ ವೈಯಕ್ತಿಕ ಕ್ರೀಡೆಗಳು ಜರುಗಿದವು. ನಗರದ ಟ್ಯಾಗೋರ್ ಸ್ಮಾರಕ ಪ್ರೌಢಶಾಲೆ ವಿದ್ಯಾರ್ಥಿ ಅರವಿಂದ್ (ಪ್ರಥಮ) ಮತ್ತು ಮಹೇಶ್ ಬಾಬು (ದ್ವಿತಿಯ) ಸ್ಥಾನ ಪಡೆದು ಡಿಸ್ಕ್‌ ಥ್ರೋನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಾಧನೆಯನ್ನು ಟ್ಯಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಕೆ. ಅಮರೇಶ್ ಹಾಗೂ ಪ್ರಧಾನ ಕಾರ್ಯದರ್ಶಿ ದರೂರ್ ಬಸವರಾಜ ಪಾಟೀಲ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸದಸ್ಯರು ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT