ರಾಯಚೂರು: ಜುಲೈ ಕೊನೆಯ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಕ್ರಿಕೆಟ್ ತಂಡಕ್ಕೆ ಆಯ್ಕೆ ನಡೆಯಲಿದೆ. ಅದಕ್ಕೆ ಪೂರ್ವಭಾವಿಯಾಗಿ 19 ವರ್ಷದೊಳಗಿನ ಯುವತಿಯರ ಆಯ್ಕೆ ಪ್ರಕ್ರಿಯೆ ಜುಲೈ 21ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕೆಎಸ್‌ಸಿಎ–ಬಿ ಮೈದಾನದಲ್ಲಿ ನಡೆಯಲಿದೆ.
2005ರ ಸೆಪ್ಟೆಂಬರ್ 1ರಂದು ಅಥವಾ ನಂತರ ಜನಿಸಿದವರು ಮಾತ್ರ ಅರ್ಹರಾಗಿರುತ್ತಾರೆ. ಆಸಕ್ತ ಯುವತಿಯರು ತಮ್ಮ ಜನ್ಮ ದಿನಾಂಕದ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಕ್ರಿಕೆಟ್ ಸಮವಸ್ತ್ರದಲ್ಲಿ ನಿಗದಿ ಪಡಿಸಿದ ದಿನಾಂಕದಂದು ಬೆಳಿಗ್ಗೆ 8 ಗಂಟೆಗೆ ಹಾಜರಿರಬೇಕು ಎಂದು ರಾಯಚೂರು ವಲಯದ ಸಂಯೋಜಕ ಸುಜಿತ್ ಬೋಹರಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.