ADVERTISEMENT

ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2023, 8:02 IST
Last Updated 26 ಡಿಸೆಂಬರ್ 2023, 8:02 IST
   

ಮುದಗಲ್ (ರಾಯಚೂರು): ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್‌ ಬಳಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿ ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಿಂಗಸೂರು ತಾಲ್ಲೂಕಿನ ಸಜ್ಜಲಗುಡ್ಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 53 ವಿದ್ಯಾರ್ಥಿಗಳು ಮತ್ತು 6 ಮಂದಿ ಶಿಕ್ಷಕರು ಸರ್ಕಾರಿ ಬಸ್‌ ಬುಕ್‌ ಮಾಡಿಕೊಂಡು ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ರಾಕ್ ಗಾರ್ಡನ್ ವೀಕ್ಷಿಸಲು ತೆರಳುತ್ತಿದ್ದರು.

ADVERTISEMENT

ಬೇವಿನಹಳ್ಳಿ ಕ್ರಾಸ್ ಬಳಿ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದಾಗ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.