
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಪತ್ರ
ರಾಯಚೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 6ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: 8867537799 ಮತ್ತು ದೂ.080-29903994 ಹಾಗೂ https://kmcdc.karnataka.gov.in ಸಂಪರ್ಕಿಸಬಹುದಾಗಿದೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.