ADVERTISEMENT

ರಾಯಚೂರು| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ, ದಂಡ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 13:55 IST
Last Updated 3 ಡಿಸೆಂಬರ್ 2024, 13:55 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ರಾಯಚೂರು: ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2018ರ ಏಪ್ರಿಲ್‌ನಲ್ಲಿ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಲಯ ಮುಖ್ಯ ಆರೋಪಿ ಸಿಂಧನೂರು ತಾಲ್ಲೂಕಿನ ಉಮಲೂಟಿಯ ರಮೇಶ ಮರಿಯಪ್ಪಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿದೆ.

ಬಾಲಕಿಯ ಅಪಹರಣಕ್ಕೆ ಸಹಕರಿಸಿದ್ದ ಉಮಲೂಟಿಯ ಇನ್ನೊಬ್ಬ ಆರೋಪಿ ರಮೇಶ ಮುದಿಯಪ್ಪಗೆ 2 ವರ್ಷಗಳ ಸಾಮಾನ್ಯ ಕಾರಾಗೃಹ ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿ ಸಿಂಧನೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶೆ ಬಿ.ಬಿ.ಜಕಾತಿ ಡಿಸೆಂಬರ್ 2ರಂದು ತೀರ್ಪು ನೀಡಿದ್ದಾರೆ.

ADVERTISEMENT

ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ಸಿಪಿಐ ನಾಗರಾಜ ಕಮ್ಮಾರ ಅವರು ಆರೋಪಿತರ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ ₹ 4.50 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ.ಮಂಜುನಾಥ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.