ADVERTISEMENT

‘ನರೇಗಾ: ₹60 ಲಕ್ಷ ಅನುದಾನ ಮಂಜೂರು’

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 13:24 IST
Last Updated 18 ಆಗಸ್ಟ್ 2023, 13:24 IST
ಶಕ್ತಿನಗರ ಬಳಿಯ ಶಾಖವಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮ ಕೂಡ್ಲೂರು ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು
ಶಕ್ತಿನಗರ ಬಳಿಯ ಶಾಖವಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮ ಕೂಡ್ಲೂರು ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು   

ಶಕ್ತಿನಗರ: ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಶಾಖವಾದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಹೇಳಿದರು.

ರಾಯಚೂರು ತಾಲ್ಲೂಕಿನ ಶಾಖವಾದಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ದಮ್ಮ ಆಂಜನೇಯ ಕೂಡ್ಲೂರು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿಗೆ ನರೇಗಾ ಯೋಜನೆಯಡಿ ₹60 ಲಕ್ಷ ಅನುದಾನ ಮಂಜೂರು ಆಗಿದೆ. ಹೆಚ್ಚು ಉದ್ಯೋಗ ಸೃಜಿಸಬೇಕು. ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು. ರೇಷ್ಮೆ, ತೋಟಗಾರಿಕೆ, ಕೊಟ್ಟಿಗೆ ನಿರ್ಮಾಣಕ್ಕೆ ನೆರವು ನೀಡುವ ಅವಕಾಶವೂ ಈ ಯೋಜನೆಯಲ್ಲಿದೆ. ಹೂಳೆತ್ತುವುದು, ಶಾಲಾ ಮೈದಾನ ನಿರ್ಮಾಣ ಸೇರಿದಂತೆ ಇನ್ನಿತರ ವೈಯಕ್ತಿಕ ಕಾಮಗಾರಿಗಳಿಗೂ ಆದ್ಯತೆ ನೀಡಲಾಗಿದೆ ಎಂದರು.

ADVERTISEMENT

ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ದಾರಿದೀಪ, 15ನೇ ಹಣಕಾಸು ಯೋಜನೆ, ಭಾಗ್ಯಜ್ಯೋತಿ ಹಾಗೂ ಪ್ರಾಥಮಿಕ ಶಾಲಾ ಕೊಠಡಿ, ಬಿಸಿಯೂಟ ಸೇರಿದಂತೆ ಇನ್ನಿತರ ವಿಷಯಗಳನ್ನು ಚರ್ಚಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಖಮರ್ ಬೇಗಂ, ಟಿ.ಎ.ರಂಜಿತ್, ಗ್ರಾ.ಪಂ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.