ADVERTISEMENT

ಕೃಷ್ಣಾನದಿ ಪ್ರವಾಹ: ಶೀಲಹಳ್ಳಿ ಸೇತುವೆ ಮುಳುಗಡೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 12:20 IST
Last Updated 7 ಆಗಸ್ಟ್ 2020, 12:20 IST
ಲಿಂಗಸುಗೂರು ತಾಲ್ಲೂಕಿನಲ್ಲಿ ಕೃಷ್ಣಾನದಿ ನಡುಗಡ್ಡೆ ಗ್ರಾಮಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಪ್ರವಾಹದಲ್ಲಿ ಶುಕ್ರವಾರ ಮುಳುಗಡೆ ಆಗಿದ್ದು, ಕಟ್ಟೆಚ್ಚರ ವಹಿಸಲು ಪೊಲೀಸರನ್ನು ನಿಯೋಜಿಸಲಾಗಿದೆ
ಲಿಂಗಸುಗೂರು ತಾಲ್ಲೂಕಿನಲ್ಲಿ ಕೃಷ್ಣಾನದಿ ನಡುಗಡ್ಡೆ ಗ್ರಾಮಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಪ್ರವಾಹದಲ್ಲಿ ಶುಕ್ರವಾರ ಮುಳುಗಡೆ ಆಗಿದ್ದು, ಕಟ್ಟೆಚ್ಚರ ವಹಿಸಲು ಪೊಲೀಸರನ್ನು ನಿಯೋಜಿಸಲಾಗಿದೆ   

ಲಿಂಗಸುಗೂರು (ರಾಯಚೂರು ಜಿಲ್ಲೆ): ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 1.83 ಲಕ್ಷ ಕ್ಯುಸೆಕ್‌ ಅಡಿ ನೀರು ಹರಿಬಿಡಲಾಗುತ್ತಿದ್ದು, ತಾಲ್ಲೂಕಿನ ನಡುಗಡ್ಡೆ ಗ್ರಾಮಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಹಂಚಿನಾಳ ಮಧ್ಯೆದ ಸೇತುವೆ ಶುಕ್ರವಾರ ಮುಳುಗಡೆ ಆಗಿದೆ.

ಇದರಿಂದ ಹಂಚಿನಾಳ, ಯಳಗುಂದಿ, ಕಡದರಗಡ್ಡಿ, ಯರಗೋಡಿ ಗ್ರಾಮಗಳು ಹಾಗೂ ಮ್ಯಾದರಗಡ್ಡಿ, ವೆಂಕಮ್ಮನಗಡ್ಡಿ, ಕರಕಲಗಡ್ಡಿ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಪರ್ಯಾಯ ಮಾರ್ಗ 20 ಕಿಲೋ ಮೀಟರ್‌ ಸುತ್ತುವರಿದು ಜಲದುರ್ಗ ಸೇತುವೆ ಮೂಲಕ ಲಿಂಗಸುಗೂರಿಗೆ ಬರಬೇಕಿದೆ.ಆಲಮಟ್ಟಿ ಜಲಾಶಯದ ಹೊರಹರಿವು ಕಡಿಮೆ ಮಾಡಿದ್ದು, ಪ್ರವಾಹ ಇಳಿಮುಖವಾಗಲಿದೆ.

ಒಂದೇ ದಿನದಲ್ಲಿ ನದಿಗೆ 1.8 ಲಕ್ಷ ಕ್ಯುಸೆಕ್‌ವರೆಗೂ ನೀರು ಹರಿಬಿಡಲಾಗಿದ್ದು, ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲ್ಲೂಕುಗಳ ನದಿಪಾತ್ರದ ಗ್ರಾಮಗಳಲ್ಲಿ ಪೂರ್ವದಲ್ಲಿಯೇ ಮುನ್ಸೂಚನೆ ನೀಡಲಾಗಿತ್ತು. ಹೀಗಾಗಿ ಯಾವುದೇ ಆಸ್ತಿ, ಜೀವಹಾನಿ ಉಂಟಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.