ADVERTISEMENT

‘ಮಹಿಳೆಯರಿಗೆ ಸ್ವಾವಲಂಬಿ ಜೀವನ ಅಗತ್ಯ’

​ಪ್ರಜಾವಾಣಿ ವಾರ್ತೆ
Published 19 ಜನವರಿ 2024, 16:27 IST
Last Updated 19 ಜನವರಿ 2024, 16:27 IST
ಸಿರವಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರ ಜ್ಞಾನ ವಿಕಾಸ ಕೇಂದ್ರದಿಂದ ಹೊಲಿಗೆ ಯಂತ್ರ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ನೀಡಲಾಯಿತು
ಸಿರವಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರ ಜ್ಞಾನ ವಿಕಾಸ ಕೇಂದ್ರದಿಂದ ಹೊಲಿಗೆ ಯಂತ್ರ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ನೀಡಲಾಯಿತು   

ಸಿರವಾರ : ‘ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿ ಜೀವನ ನಡೆಸುವುದು ಅಗತ್ಯ. ಅದಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘ ಅಗತ್ಯ ಸಹಕಾರ ನೀಡಲಿದೆ’ ಎಂದು ಸಂಘದ ನಿರ್ದೇಶಕ ಮೋಹನ ನಾಯ್ಕ್ ಹೇಳಿದರು.

ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರ ಜ್ಞಾನ ವಿಕಾಸ ಕೇಂದ್ರದಿಂದ ಗುರುವಾರ ನಡೆದ ಹೊಲಿಗೆ ಯಂತ್ರ ತರಬೇತಿಯ ಸಮಾರೋಪ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಸಿರವಾರ ವಲಯದ ಸಹಕಾರ ಜ್ಞಾನ ವಿಕಾಸ ಕೇಂದ್ರದ ಸದ್ಯಸರಿಗೆ 3 ತಿಂಗಳ ಉಚಿತ ಹೊಲಿಗೆ ತರಬೇತಿ ನೀಡಿ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಜನ ಮಂಗಳ ಕಾರ್ಯಕ್ರಮದಡಿ ಉಚಿತ ವೀಲ್ ಚೇರ್ ವಿತರಣೆ ಮಾಡಲಾಯಿತು.

ಜನ ಜಾಗೃತಿ ಸಮಿತಿ ಸದಸ್ಯ ಅರಿಕೇರಿ ಬಸವಲಿಂಗಪ್ಪ, ತಾಲ್ಲೂಕು ಯೋಜನಾಧಿಕಾರಿ ಚಂದ್ರಹಾಸ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾ ನವಲಕಲ್, ಸಹಕಾರ ಜ್ಞಾನ ವಿಕಾಸ ಕೇಂದ್ರದ ಮೇಲ್ವಿಚಾರಕಿ ವನಿತಾ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಕವಿತಾ, ಸೇವಾ ಪ್ರತಿನಿಧಿ ಫರ್ವಿನ್, ಕಲ್ಪನಾ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.