ADVERTISEMENT

ಮುರುಘಾಶ್ರೀ ಪ್ರಕರಣ ತಮಿಳುನಾಡಿಗೆ ವರ್ಗಾಯಿಸಿ: ಎಂ.ಗೋಪಿನಾಥ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 13:34 IST
Last Updated 2 ಸೆಪ್ಟೆಂಬರ್ 2022, 13:34 IST
ಶಿವಮೂರ್ತಿ ಮುರುಘಾ ಶರಣರು
ಶಿವಮೂರ್ತಿ ಮುರುಘಾ ಶರಣರು   

ರಾಯಚೂರು: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ತಮಿಳುನಾಡು ಅಥವಾ ಕೇರಳ ರಾಜ್ಯಕ್ಕೆ ವರ್ಗಾವಣೆ ಮಾಡಿ ನಿಷ್ಪಕ್ಷಪಾತ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಉಸ್ತುವಾರಿ ಎಂ.ಗೋಪಿನಾಥ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಏನೇ ಇದ್ದರೂ ಸತ್ಯಾಂಶ ಹೊರಬೇಕು. ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಕಾನೂನು ಎಲ್ಲರಿಗೂ ಒಂದೇ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿರಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೇರಿದ ಬಾಲಕಿಯೂ ಇದ್ದು ಎಸ್.ಸಿ, ಎಸ್.ಟಿ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾದರೂ ಪೊಲೀಸರು ಆರೋಪಿ ಶ್ರೀಗಳಿಗೆ ಬಂಧಿಸದೇ ಆರು ದಿನದ ಬಳಿಕ ಬಂಧಿಸಿದ್ದಾರೆ. ಇದು ಕೆಟ್ಟ ಸಾಂಪ್ರದಾಯಕ್ಕೆ ನಾಂದಿ ಹಾಡಿದಂತಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಆರಂಭದಲ್ಲಿಯೇ ಮುರುಘಾ ಶರಣರ ಪರ ಹೇಳಿಕೆ ನೀಡಿದ್ದು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಮುರುಘಾ ಮಠ ಹಾಗೂ ಮುರುಘಾ ಶಿವಮೂರ್ತಿ ಮುರುಘಾ ಶರಣರು ಪ್ರಭಾವಿಯಾಗಿದ್ದು ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದರು.

ADVERTISEMENT

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್. ಮುನಿಯಪ್ಪ, ಕೆ.ಬಿ ವಾಸು, ಜಗ್ಗೇಶ, ನರಸಪ್ಪ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.