ಸಾಂದರ್ಭಿಕ ಚಿತ್ರ (ಒಳಚಿತ್ರದಲ್ಲಿ ವೈದ್ಯ ಡಾ.ಜಯಪ್ರಕಾಶ ಬೆಟ್ಟದೂರು)
ರಾಯಚೂರು: ನಗರದ ವೈದ್ಯ ಡಾ.ಜಯಪ್ರಕಾಶ ಬೆಟ್ಟದೂರು ಮಧ್ಯಾಹ್ನ ರಾಯಚೂರಿನಿಂದ ಮಾನ್ವಿಗೆ ಹೋಗುವಾಗ ಸಾಥ ಮೈಲ್ ಕ್ರಾಸ್ ಹತ್ತಿರ ಇವರ ಕಾರಿನ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಗುಂಡಿನ ದಾಳಿ ನಡೆಸಿದ್ದಾರೆ.
ಕಾರಿನ ಬಾನಟ್‌ಗೆ ಗುಂಡು ತಗುಲಿದ್ದು, ವೈದ್ಯರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ನಿಖಿಲ್ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ದಾಳಿಗೆ ಕಾರಣ ತಿಳಿದು ಬಂದಿಲ್ಲ. ಗ್ರಾಮೀಣ ಠಾಣೆಯ ಪೊಲೀಸರು ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.