ADVERTISEMENT

ರಾಯಚೂರು ಡಿಸಿ ಕಚೇರಿಯಲ್ಲಿ ಶಾರ್ಟ್ ಸರ್ಕಿಟ್: ಆತಂಕ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 7:09 IST
Last Updated 26 ಮಾರ್ಚ್ 2020, 7:09 IST
   

ರಾಯಚೂರು:ಜಿಲ್ಲಾಧಿಕಾರಿ ಕಚೇರಿಯ ಇನ್ವರ್ಟರ್ ಕೋಣೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ಆಗಿದ್ದು, ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು.

ಅಧಿಕಾರಿಗಳೆಲ್ಲ ತಕ್ಷಣವೇ ಹೊರಗೆ ಓಡಿಬಂದರು. ಕಚೇರಿಯ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು ಹೀಗಾಗಿ ಅಪಾಯ ತಪ್ಪಿತು.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುತ್ತಿದ್ದಾರೆ. ಜೆಸ್ಕಾಂ ಸಿಬ್ಬಂದಿದುರಸ್ತಿ ಆರಂಭಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.