ಮುದಗಲ್: ‘ಪಟ್ಟಣದ ನಗರೇಶ್ವರ ದೇವಸ್ಥಾನದಲ್ಲಿರುವ ವಾಸವಿ ಕಲ್ಯಾಣ ಮಂಟಪದಲ್ಲಿ ಅಯೋಧ್ಯ ಶ್ರೀರಾಮ ಮಂದಿರದ ಮಾದರಿ ಪ್ರದರ್ಶನ ನಡೆಸಲಾಗುತ್ತಿದೆ’ ಎಂದು ಶ್ರೀರಾಮ ಮಂದಿರದ ಪ್ರದರ್ಶನಕಾರ ವಿನಯರಾಮ ಹಳೆಮನಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಭಾನುವಾರದಿಂದ 6 ದಿನಗಳವರೆಗೆ ಪ್ರದರ್ಶನ ನಡೆಯಲಿದೆ. ಈ ಪ್ರದರ್ಶನವನ್ನು 108 ಕಡೆ ನಡೆಸುವ ಉದ್ದೇಶ ಹೊಂದಲಾಗಿದೆ. ಈಗಾಗಲೇ ರಾಜ್ಯದ 14 ಜಿಲ್ಲೆಗಳಲ್ಲಿ 34 ಮಠಗಳು ಸೇರಿ 82 ಕಡೆ ಪ್ರದರ್ಶನ ಮಾಡಲಾಗಿದೆ. ಪಟ್ಟಣದ ಹಾಗೂ ಸುತ್ತಲಿನ ಗ್ರಾಮಗಳ ನಾಗರಿಕರು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಬಂದು ವೀಕ್ಷಣೆ ಮಾಡಬೇಕು’ ಎಂದು ಮನವಿ ಮಾಡಿದರು.
ಆರ್ಯವೈಶ್ಯ ಸಮಾಜದ ಅಧ್ಯಕ್ಷ ಬದ್ರಿನಾಥ ಸುರಪುರ, ವಾಸುದೇವ ಸುರಪುರ, ಬದ್ರಿನಾಥ ಟಿ.ವಿ, ಆರ್ಯವೈಶ್ಯ ಮಹಿಳಾ ಮಂಡಳದ ಅಧ್ಯಕ್ಷೆ ಸುಜಾತಾ ಎಸ್.ಕಂಪ್ಲಿ, ಕಾರ್ಯದರ್ಶಿ ಭಾರತಿ, ಲಕ್ಷ್ಮಿ ಸುರಪುರ ಹಾಗೂ ಪೂಜಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.