ADVERTISEMENT

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದರಾಮನಂದ ಸ್ವಾಮೀಜಿ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 13:13 IST
Last Updated 15 ಜನವರಿ 2026, 13:13 IST
   

ರಾಯಚೂರು: ತಿಂಥಣಿಯ ಕನಕ ಗುರು ಪೀಠದ ಆವರಣದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದರಾಮನಂದ ಸ್ವಾಮೀಜಿ ಅಂತ್ಯಕ್ರಿಯೆ ಅಪಾರ ಭಕ್ತ ಸಮೂಹದ ಸಮ್ಮುಖದಲ್ಲಿ ನೆರವೇರಿಸಲಾಯಿತು.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹಾಗೂ ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಅವರು ಸರ್ಕಾರದ ಪ್ರತಿನಿಧಿಯಾಗಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲೆಯ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ ಪ್ರಮುಖ ಗಣ್ಯರು ಸ್ವಾಮೀಜಿ ಅಂತಿಮ ದರ್ಶನ ಪಡೆದರು. ಅಂತ್ಯ ಸಂಸ್ಕಾರದಲ್ಲಿ 15 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.