ಲಿಂಗಸುಗೂರು: ಕಲಬುರಗಿ ವಿಭಾಗದ ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಪೀಠಾಧಿಪತಿ ಸಿದ್ಧರಾಮಾನಂದಪುರಿ ಸ್ವಾಮೀಜಿ ಅವರ ಪುಣ್ಯರಾಧನೆ ಕಾರ್ಯಕ್ರಮವನ್ನು ಜ.31 ಮತ್ತು ಫೆ 1ರಂದು ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕುಪ್ಪಣ್ಣ ಕೊಡ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಪುಣ್ಯರಾಧನೆ ಕಾರ್ಯಕ್ರಮವನ್ನು ತಿಂಥಣಿ ಬ್ರಿಡ್ಜ್ ಕನಕಗುರು ಪೀಠದ ಶಾಖಾ ಮಠದಲ್ಲಿ ಜ.31ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ. ಫೆ.1ರಂದು ನುಡಿನಮನ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿವಿಧ ಮಠಾಧೀಶರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರು, ಶಾಸಕರು, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.
ಕನಕ ಗುರು ಪೀಠದ ತಾಲ್ಲೂಕು ಅಧ್ಯಕ್ಷ ಸಿದ್ದಯ್ಯ ಗ್ಯಾನಪ್ಪಯ್ಯನವರ್, ಗುಂಡಪ್ಪ ಸಾಹುಕಾರ, ಪರಸಪ್ಪ ಇಂದವಾರ, ಬೀರಪ್ಪ ಪೂಜಾರಿ, ಶಶಿಧರ ಬಿಜ್ಜೂರು, ಗ್ಯಾನಪ್ಪ ಹೊಳೆಯಾಚಿ, ಚೆನ್ನಬಸವ, ಕೃಷ್ಣ ಯಲಗಲದಿನ್ನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.