
ಪ್ರಜಾವಾಣಿ ವಾರ್ತೆ:
ಮಸ್ಕಿ: ತಾಲ್ಲೂಕು ಆಡಳಿತ ಸೇರಿ ವಿವಿಧ ಸಂಘಟನೆಗಳು ಮತ್ತು ಇಲಾಖೆಗಳ ವತಿಯಿಂದ ಬುಧವಾರ ಸಿದ್ಧರಾಮೇಶ್ವರರ ಜಯಂತಿಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.
ತಾಲ್ಲೂಕು ಆಡಳಿತದ ವತಿಯಿಂದ ಸಿದ್ಧರಾಮೇಶ್ವರರ ವೃತ್ತದಲ್ಲಿ ಭಾವಚಿತ್ರ ಹಾಗೂ ನಾಮಫಲಕಕ್ಕೆ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಪುರಸಭೆ ಉಪಾಧ್ಯಕ್ಷೆ ಗೀತಾ ಶಿವರಾಜ ಬುಕ್ಕಣ್ಣ, ಸ್ಥಾಯಿ ಸಮಿತಿ ಅದ್ಯಕ್ಷ ಚೇತನ ಪಾಟೀಲ, ಭೋವಿ ಸಮಾಜದ ಅಧ್ಯಕ್ಷ ದುರಗಪ್ಪ ಚಿಗರಿ ಸೇರಿದಂತೆ ಅನೇಕ ಮುಖಂಡರು, ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಪುರಸಭೆ ಸದಸ್ಯರು ಹಾಗೂ ಭೋವಿ ಸಮಾಜದ ಗಣ್ಯರು ಮಾಲಾರ್ಪಣೆ ಮಾಡಿದರು
ಇದಲ್ಲದೆ ತಹಶೀಲ್ದಾರ್ ಕಚೇರಿ, ತಾಲ್ಲೂಕು ಪಂಚಾಯಿತಿ, ಪುರಸಭೆ, ಜೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಚೇರಿಗಳಲ್ಲೂ ಸಿದ್ಧರಾಮೇಶ್ವರರ ಜಯಂತಿ ಆಚರಿಸಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.