
ಪ್ರಜಾವಾಣಿ ವಾರ್ತೆ
ಸಿಂಧನೂರು: ‘ತಾಲ್ಲೂಕಿನ ಅಂಬಾಮಠದ ಅಂಬಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ 20 ದಿನಗಳಲ್ಲಿ ₹43,10,530 ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ’ ಎಂದು ಎಂದು ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ತಿಳಿಸಿದ್ದಾರೆ.
ಬುಧವಾರ ಹುಂಡಿ ಎಣಿಕೆ ಕಾರ್ಯ ಮುಗಿದ ನಂತರ ಹೇಳಿಕೆ ನೀಡಿರುವ ಅವರು,‘ಜಾತ್ರಾ ಮಹೋತ್ಸವದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಲಕ್ಷಾಂತರ ಭಕ್ತರು ಭಕ್ತಿಭಾವದಿಂದ ದೇಣಿಗೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಹುಂಡಿ ಎಣಿಕೆ ಸಂದರ್ಭದಲ್ಲಿ ಅಂಬಾದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಂಗನಗೌಡ ಗೊರೇಬಾಳ, ಶಿರಸ್ತೇದಾರ್ ಅಂಬಾದಾಸ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.