
ಸಿಂಧನೂರು: ತಾಲ್ಲೂಕಿನ ತುರ್ವಿಹಾಳ ಸಮೀಪದ ಹತ್ತಿಗುಡ್ಡ ಗ್ರಾಮದಲ್ಲಿ ಬಿಲ್ವಪತ್ರೆ ಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ತುರ್ವಿಹಾಳ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸುಜಾತಾ.ಡಿ.ಎನ್. ಅವರ ನೇತೃತ್ವದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪಿಎಸ್‌ಐ ಸುಜಾತಾ,‘ಗ್ರಾಮದಲ್ಲಿ ಬಿಲ್ವಪತ್ರೆ ಬಸವೇಶ್ವರ ಜಾತ್ರೆ ನಡೆಯುವ ಕಾರಣ ಶಿಸ್ತು, ಶಾಂತಿ ಮತ್ತು ಸೌಹಾರ್ದ ಕಾಪಾಡಲು ಪೂರ್ವಭಾವಿಯಾಗಿ ಪಥ ಸಂಚಲನ ನಡೆಸಲಾಗಿದೆ. ಸಾರ್ವಜನಿಕರು ಆತಂಕವಿಲ್ಲದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು’ ಎಂದರು.
‘ಜಾತ್ರೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಒದಗಿಸಲಾ ಗುವುದು. ಅನುಮಾನಸ್ಪದ ಚಟುವಟಿಕೆಗಳು ಕಂಡುಬಂದರೆ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.