ADVERTISEMENT

ಸಿಂಧನೂರು: 13ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 14:03 IST
Last Updated 10 ಸೆಪ್ಟೆಂಬರ್ 2024, 14:03 IST
ಸುರೇಶ ಹಚ್ಚೊಳ್ಳಿ
ಸುರೇಶ ಹಚ್ಚೊಳ್ಳಿ   

ಸಿಂಧನೂರು: ‘ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಹಾಗೂ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಗರದ ಸ್ತ್ರೀಶಕ್ತಿ ಭವನದ ಪಕ್ಕದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ವಿಸರ್ಜನೆಯ ಬೃಹತ್ ಶೋಭಾಯಾತ್ರೆ ಸೆ.13 ರಂದು ನಡೆಯಲಿದೆ’ ಎಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ ಹಚ್ಚೊಳ್ಳಿ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೆ.12 ರಂದು ಮಹಾಪ್ರಸಾದ ಇರಲಿದೆ. 13 ರಂದು ಬೆಳಿಗ್ಗೆ 11.45ಗಂಟೆಗೆ ಹಿಂದೂ ಮಹಾಗಣಪತಿ ವಿಸರ್ಜನೆಯ ನಿಮಿತ್ತ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ಚಂಡಿವಾದ್ಯ, ಡೊಳ್ಳು ಕುಣಿತ, ಕೋಲಾಟ ಸೇರಿದಂತೆ ವಿವಿಧ ವಾದ್ಯಮೇಳಗಳು ಸಾಥ್‌ ನೀಡಲಿವೆ. ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ನಟರಾಜ್ ಕಾಲೊನಿ ರಸ್ತೆ, ಟಿಪ್ಪುಸುಲ್ತಾನ್ ಸರ್ಕಲ್, ಹಳೆಬಜಾರ್ ರಸ್ತೆ, ಕಿತ್ತೂರುರಾಣಿ ಚೆನ್ನಮ್ಮ ವೃತ್ತಗಳಲ್ಲಿ ಯಾತ್ರೆ  ಸಂಚರಿಸಲಿದೆ’ ಎಂದು ತಿಳಿಸಿದರು. 

ಗೌರವಾಧ್ಯಕ್ಷ ಸಿದ್ರಾಮೇಶ ಮನ್ನಾಪುರ ಮಾತನಾಡಿದರು.

ADVERTISEMENT

ಪ್ರಧಾನ ಕಾರ್ಯದರ್ಶಿ ರವಿಕುಮಾರ ಉಪ್ಪಾರ, ಉಪಾಧ್ಯಕ್ಷರಾದ ಶಿವು ಹಿರೇಮಠ, ಯಲ್ಲಪ್ಪ ಯದ್ದಲದೊಡ್ಡಿ, ಸದಸ್ಯರಾದ ಶಿವು ಎಸ್‍ಆರ್‍ಕೆ, ಟಿ.ಶಿವು ಸುಕಾಲಪೇಟೆ, ಬಸವರಾಜ ಸಾಲಗುಂದಾ, ರವಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.