ADVERTISEMENT

ಸಿಂಧನೂರು: ಶುಶ್ರೂಷಕ ಅಧಿಕಾರಿಗಳ ದಿನಾಚರಣೆ ಮೇ12 ರಂದು

​ಪ್ರಜಾವಾಣಿ ವಾರ್ತೆ
Published 11 ಮೇ 2025, 16:05 IST
Last Updated 11 ಮೇ 2025, 16:05 IST

ಸಿಂಧನೂರು: ನಗರದ ಸನ್‍ರೈಸ್ ಡಿ ಫಾರಂ ಸಿ, ನರ್ಸಿಂಗ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೇ12 ರಂದು ಬೆಳಿಗ್ಗೆ 11 ಗಂಟೆಗೆ ‘ಶುಶ್ರೂಷಕ ಅಧಿಕಾರಿಗಳ ದಿನಾಚರಣೆ’ ಹಮ್ಮಿಕೊಂಡಿರುವುದಾಗಿ ಎಂ.ಎಂ.ಶೈಕ್ಷಣಿಕ ಟ್ರಸ್ಟ್ ಅಧ್ಯಕ್ಷ ಇರ್ಫಾನ್ ತಿಳಿಸಿದ್ದಾರೆ.

ಭಾನುವಾರ ಹೇಳಿಕೆ ನೀಡಿರುವ ಅವರು ಈ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು, ಶಿಕ್ಷಣ ಪ್ರೇಮಿಗಳು, ವೈದ್ಯಕೀಯ ಕ್ಷೇತ್ರದ ಹಿರಿಯರು ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಸ್ವೀಕಾರ ವಿಧಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT