
ಸಿಂಧನೂರು: ‘ಹಲವಾರು ವರ್ಷಗಳಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಕಾರಹುಣ್ಣಿಮೆ ಸಾಂಸ್ಕೃತಿಕ ಕ್ರೀಡಾ ಉತ್ಸವ ಟ್ರಸ್ಟ್‌ನಿಂದ ರೈತರಿಗಾಗಿ ಮುಂಗಾರು ಕಾರಹುಣ್ಣಿಮೆ ಸ್ಪರ್ಧೆಗಳನ್ನು ನಡೆಸುತ್ತಾ ಬರಲಾಗುತ್ತಿದೆ. ಇದರಿಂದ ರೈತ ಸಮೂಹಕ್ಕೆ ಸ್ಫೂರ್ತಿ ಲಭಿಸುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.
ನಗರದ ಕುಷ್ಟಗಿ ರಸ್ತೆಯ ಜಾನುವಾರು ಮಾರುಕಟ್ಟೆಯಲ್ಲಿ ತಾಲ್ಲೂಕು ಕಾರಹುಣ್ಣಿಮೆ ಸಾಂಸ್ಕೃತಿಕ ಕ್ರೀಡಾ ಉತ್ಸವ ಟ್ರಸ್ಟ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮುಂಗಾರು ಕಾರಹುಣ್ಣಿಮೆ ಸಂಭ್ರಮ-2025 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ‘ಹಳ್ಳಿಗಳಲ್ಲಿ ಎತ್ತುಗಳ ಬದಲಾಗಿ ಟ್ರ್ಯಾಕ್ಟರ್‌ಗಳು ಹೆಚ್ಚಿವೆ. ಪಶು ಸಾಕಾಣಿಕೆ ಪ್ರಮಾಣ ಕಡಿಮೆಯಾಗಿ ಪಾಕೆಟ್ ಹಾಲು ಅನಿವಾರ್ಯವಾಗಿದೆ. ಕೃಷಿಕರು ಸಹ ಶ್ರಮರಹಿತ ಬದುಕಿನತ್ತ ವಾಲುತ್ತಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ ಮಾತನಾಡಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಎಪಿಎಂಸಿ ಕಾರ್ಯದರ್ಶಿ ರವಿಚಂದ್ರ, ಮುಖಂಡರಾದ ಹನುಮಂತಪ್ಪ ಮುದ್ದಾಪುರ, ಖಾಜಿಮಲಿಕ್, ನಲ್ಲಾ ವೆಂಕಟೇಶ್ವರರಾವ್, ಚನ್ನನಗೌಡ ಮೇಟಿ, ವೀರೇಶ ಯಡಿಯೂರಮಠ, ಮಸ್ಕಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹೆಬೂಬಸಾಬ ಮುದ್ದಾಪುರ, ಸದಸ್ಯರಾದ ಶೇಖರಪ್ಪ, ರವಿಗೌಡ ಮಲ್ಲದಗುಡ್ಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.