ADVERTISEMENT

14 ರಂದು ಗುರುವಂದನೆ, ಸನ್ಮಾನ ಸಮಾರಂಭ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 15:57 IST
Last Updated 8 ಜೂನ್ 2025, 15:57 IST

ಸಿಂಧನೂರು: ನಗರದ ವೆಂಕಟೇಶ್ವರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಎಫ್.ಮಸ್ಕಿ ಅವರು ವಯೋನಿವೃತ್ತಿ ಹೊಂದಿದ ಪ್ರಯುಕ್ತ ವಿದ್ಯಾರ್ಥಿಗಳ ಬಳಗದಿಂದ ಜೂ.14 ರಂದು ಮಧ್ಯಾಹ್ನ 1.30 ಗಂಟೆಗೆ ಸ್ಥಳೀಯ ಟೌನ್ ಹಾಲ್‍ನಲ್ಲಿ ಗುರುವಂದನಾ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹಳೆ ವಿದ್ಯಾರ್ಥಿ ಬಳಗದ ಎಂ.ಭಾಸ್ಕರ್ ಹಾಗೂ ಡಾ.ಹುಸೇನಪ್ಪ ಅಮರಾಪುರ ತಿಳಿಸಿದ್ದಾರೆ.

ಭಾನುವಾರ ಹೇಳಿಕೆ ನೀಡಿರುವ ಅವರು, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಹಂಪನಗೌಡ ಬಾದರ್ಲಿ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೇರಿದಂತೆ ಗಣ್ಯರು, ಮುಖ್ಯಶಿಕ್ಷಕರು, ವಿವಿಧ ಸಮಾಜಗಳ ಅಧ್ಯಕ್ಷರು, ಅಧಿಕಾರಿಗಳು ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ಹಳೆಯ ವಿದ್ಯಾರ್ಥಿಗಳು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT