ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಗ್ರಾಮವೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿ ಅಜಮೀರ್‌ಸಾಬ್ ಎಂಬಾತನನ್ನು ಬಳಗಾನೂರು ಪೊಲೀಸರು ಭಾನುವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಗ್ರಾಮದ ಮಸೀದಿ ಹತ್ತಿರ ವಾಸವಿರುವ ವ್ಯಕ್ತಿಯೊಬ್ಬರ ಪುತ್ರಿ ಶುಕ್ರವಾರ ಬೆಳಿಗ್ಗೆ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಜಮೀರ್‌ಸಾಬ್ ಬಾಲಕಿಗೆ ಹಣ ನೀಡಿ ಪುಸಲಾಯಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.
ಅಪ್ರಾಪ್ತೆಯ ತಂದೆ ಬಳಗಾನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಆರೋಪಿಯ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
‘ಮಗುವಿಗೆ ಮೂತ್ರ ಮಾಡಲು ತೊಂದರೆಯಾಗಿದ್ದು ಪಾಲಕರಿಗೆ ಗೊತ್ತಾಗಿ ಶನಿವಾರ ರಾತ್ರಿ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.