ADVERTISEMENT

ಮರಕ್ಕೆ ಬೈಕ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2025, 7:19 IST
Last Updated 28 ಡಿಸೆಂಬರ್ 2025, 7:19 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಸಿಂಧನೂರು: ತಾಲ್ಲೂಕಿನ ಮೂಡಲಗಿರಿಕ್ಯಾಂಪ್ ಬಳಿ ಶುಕ್ರವಾರ ತಡರಾತ್ರಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟರು.

ADVERTISEMENT

ಗಾಂಧಿನಗರದ ಸಂತೋಷ (22), ಹನುಮಂತರಾಯ (22) ಮೃತಪಟ್ಟ ಯುವಕರು. ಬೈಕ್‌ನಲ್ಲಿ ಸವಾರರಿಬ್ಬರು ಗಾಂಧಿನಗರದಿಂದ ಸಿಂಧನೂರಿಗೆ ಹೊರಟಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು.

ಘಟನಾ ಸ್ಥಳಕ್ಕೆ ಪಿ.ಐ. ವಿನಾಯಕ ಭೇಟಿ ನೀಡಿ ಪರಿಶೀಲಿಸಿದರು. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.