ರಾಯಚೂರು: ‘ಮೈಸೂರನ್ನು ಮಾದರಿ ರಾಜ್ಯವನ್ನಾಗಿ ರೂಪಿಸಿದ ಶ್ರೇಯಸ್ಸು ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಸಲ್ಲುತ್ತದೆ ಎಂದು ಸಂಸದ ಜಿ. ಕುಮಾರ ನಾಯಕ ಹೇಳಿದರು.
ಜಿಲ್ಲಾಡಳಿತ, ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷ್ಣರಾಜಸಾಗರ ಅಣೆಕಟ್ಟೆ ನಿರ್ಮಾಣ, ಕೈಗಾರಿಕೆಗಳ ಸ್ಥಾಪನೆ ವಿಶ್ವೇಶ್ವರಯ್ಯ ಅವರ ಕೊಡುಗೆಗಳಾಗಿವೆ’ ಎಂದರು.
ಗ್ರಾಮೀಣ ಶಾಸಕ ಬಸವನಗೌಡ ದದ್ದಲ್, ನಗರ ಶಾಸಕ ಶಿವರಾಜ್ ಪಾಟೀಲ, ವಿಧಾನ ಪರಿಷತ್ ಸದಸ್ಯ ವಸಂತಕುಮಾರ, ಮಹಾನಗರ ಪಾಲಿಕೆಯ ಮೇಯರ್ ನರಸಮ್ಮ ನರಸಿಂಹ ಮಾಡಿಗೇರಿ, ಉಪಮೇಯರ್ ಸಾಜಿದ್ ಸಮೀರ್, ನಗರಸಭೆ ಸದಸ್ಯರಾದ ಲಲಿತಾ ಕೆ ಆಂಜನೇಯ, ರವಿ ಜಲ್ದಾರ್, ಶ್ರೀನಿವಾಸ ರೆಡ್ಡಿ, ಪಾಲಿಟೆಕ್ನಿಕ್ ಪ್ರಾಂಶುಪಾಲ ಗುರುಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.