ADVERTISEMENT

ಸಿರವಾರ| ಕುಷ್ಠರೋಗಿಗಳು ಶಾಪಗ್ರಸ್ತರಲ್ಲ: ಮಲ್ಲಿಕಾರ್ಜುನ ರೆಡ್ಡಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 4:40 IST
Last Updated 3 ಫೆಬ್ರುವರಿ 2026, 4:40 IST
<div class="paragraphs"><p>ಸಿರವಾರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕುಷ್ಠರೋಗ ನಿರ್ಮೂಲನಾ ದಿನ ಅಂಗವಾಗಿ ನಡೆದ ಕಾರ್ಯಕ್ರಮವನ್ನು ತಾಲ್ಲೂಕು ವೈದ್ಯಾಧಿಕಾರಿ ಮಲ್ಲಿಕಾರ್ಜುನ ರೆಡ್ಡಿ ಉದ್ಘಾಟಿಸಿದರು</p></div>

ಸಿರವಾರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕುಷ್ಠರೋಗ ನಿರ್ಮೂಲನಾ ದಿನ ಅಂಗವಾಗಿ ನಡೆದ ಕಾರ್ಯಕ್ರಮವನ್ನು ತಾಲ್ಲೂಕು ವೈದ್ಯಾಧಿಕಾರಿ ಮಲ್ಲಿಕಾರ್ಜುನ ರೆಡ್ಡಿ ಉದ್ಘಾಟಿಸಿದರು

   

ಸಿರವಾರ: ‘ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಇದ್ದು, ಕುಷ್ಠರೋಗಿಗಳು ಶಾಪಗ್ರಸ್ತರಲ್ಲ. ಅದಕ್ಕೆ ಅಗತ್ಯ ಚಿಕಿತ್ಸೆ ಪಡೆದರೆ ಸಂಪೂರ್ಣ ಗುಣಮುಖರಾಗಲು ಸಾಧ್ಯ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಮಲ್ಲಿಕಾರ್ಜುನ ರೆಡ್ಡಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶನಿವಾರ ನಡೆದ ಕುಷ್ಠರೋಗ ನಿರ್ಮೂಲನಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಸ್ಪರ್ಶರಹಿತ ಮಚ್ಛೆ, ಕೈ ಕಾಲುಗಳಲ್ಲಿ ಕಂಡು ಬಂದಲ್ಲಿ ಕೂಡಲೇ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಆಯುಷ್ ವೈದ್ಯಾಧಿಕಾರಿ ಸುನೀಲ ಸರೋದೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀದೇವಿ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.