ದೇವದುರ್ಗ: ತಾಲ್ಲೂಕಿನ ಚಿಕ್ಕಹೊನ್ನಕುಣಿ ಕ್ರಾಸ್‌ನಿಂದ ಸಿರವಾರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ವಿಳಂಬಕ್ಕೆ ಕಾರಣವಾದ, ಕಳಪೆ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಪದಾಧಿಕಾರಿಗಳು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಕೋತಿಗುಡ್ಡ, ಮಾನಸಗಲ್, ಹೇಮನೂರು, ಕೊತ್ತದೊಡ್ಡಿ, ರೇಕಲಮರಡಿ, ಮತ್ತು ಜಾಗಿರಜಾಡಲದಿನ್ನಿ ಮತ್ತು ಅರಕೇರಾ ಹತ್ತಿರ ಮಿನಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಮಾಡದೆ ಖೊಟ್ಟಿ ದಾಖಲೆ ನೀಡಿ ಬಿಲ್ ಪಾವತಿ ಮಾಡಿದ ಎಂಜಿನಿಯರ್ ಅವರನ್ನು ಅಮಾನತು ಮಾಡಬೇಕು. ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಯಲ್ಲಗೌಡ ಇರಬಗೇರಾ, ಅಮರೇಶ ಚವ್ಹಾಣ್, ಸುನಿಲ್ ಕುಮಾರ, ಮಲ್ಲಪ್ಪ ಬೆಣಕಲ್, ರಂಗು ನಾಯಕ ಚಿಕ್ಕಗುಡ್ಡ, ಸಂಗಮೇಶ ಕಲ್ಲೂರು, ಭೈರಪ್ಪ ಮಡಿವಾಳ ಮತ್ತು ಯಲ್ಲಗೌಡ ಆಕಳಕುಂಪಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.