ADVERTISEMENT

ರಾಯಚೂರು | ‘ಕೌಶಲ ಆಧಾರಿತ ತರಬೇತಿ ಪಡೆದಲ್ಲಿ ಉದ್ಯೋಗ’ : ನಾಗೇಶ್ ಆರ್

ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ನಾಗೇಶ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 6:42 IST
Last Updated 3 ಡಿಸೆಂಬರ್ 2025, 6:42 IST
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ನಾಗೇಶ್ ಆರ್. ಉದ್ಘಾಟಿಸಿದರು. ಪ್ರಾಚಾರ್ಯ ಯಂಕಣ್ಣ, ಪ್ರಾಣೇಶ ಕುಲಕರ್ಣಿ, ಶಿವರಾಜಪ್ಪ, ಚಂದ್ರಶೇಖರ ಸಜ್ಜನ ಉಪಸ್ಥಿತರಿದ್ದರು 
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ಸಭಾಂಗಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ನಾಗೇಶ್ ಆರ್. ಉದ್ಘಾಟಿಸಿದರು. ಪ್ರಾಚಾರ್ಯ ಯಂಕಣ್ಣ, ಪ್ರಾಣೇಶ ಕುಲಕರ್ಣಿ, ಶಿವರಾಜಪ್ಪ, ಚಂದ್ರಶೇಖರ ಸಜ್ಜನ ಉಪಸ್ಥಿತರಿದ್ದರು    

ರಾಯಚೂರು: ‘ಪದವಿಯ ಜತೆಗೆ ಕೌಶಲ ಆಧಾರಿತ ತರಬೇತಿ ಪಡೆದಲ್ಲಿ ಬೇಗ ಉದ್ಯೋಗ ಅವಕಾಶಗಳು ದೊರೆಯುತ್ತವೆ. ಈ ದಿಸೆಯಲ್ಲಿ ವೃತ್ತಿಪರ ಸಂಸ್ಥೆಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಉದ್ಯೋಗ ಮೇಳ ಆಯೋಜಿಸುವ ಉದ್ದೇಶವಿದೆ’ ಎಂದು ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿ ನಾಗೇಶ್ ಆರ್.ಹೇಳಿದರು.

ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ರಾಯಚೂರು-ಯಾದಗಿರಿ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.

‘ಪದವಿ ಹಂತದಲ್ಲಿ ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಅವಧಿಯಲ್ಲಿ ಕೌಶಲ ಆಧಾರಿತ ತರಬೇತಿ ನೀಡಿದಲ್ಲಿ ಅದಕ್ಕೊಂದು ಅರ್ಥ ಹಾಗೂ ಮೌಲ್ಯ ದೊರಕುತ್ತದೆ’ ಎಂದು ತಿಳಿಸಿದರು.

ADVERTISEMENT

‘ಪದವಿ ಪಡೆದ ನಂತರ ಉದ್ಯೋಗ ಹುಡುವುದೇ ಒಂದು ಕೆಲಸವಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತರಬೇತಿಗೆ ಒತ್ತುಕೊಡಲಾಗಿದೆ. ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ನೆರವಾಗುತ್ತಿದೆ’ ಎಂದು ಹೇಳಿದರು.

‘ಪ್ರಸ್ತುತ ಐದು ಮಹಿಳಾ ಕಾಲೇಜುಗಳ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಳೆದ ವರ್ಷದಿಂದ ಅನಿಮೇಷನ್, ಜಿಎಸ್‌ಟಿ ಅಕೌಂಟಿಂಗ್ ನಂತಹ ಹೊಸತರಹ ತರಬೇತಿ ನೀಡಲಾಗುತ್ತಿದೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು‘ ಎಂದು ಸಲಹೆ ನೀಡಿದರು.

ಪ್ರಾಚಾರ್ಯ ಯಂಕಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ಉದ್ಯೋಗ ಪಡೆಯುವಂತಾಗಲು ಕೌಶಲ್ಯ ಆಧಾರಿತ ವಿಷಯ ಪರಿಚಯಿಸಿ ತರಬೇತಿ ನೀಡಲಾಗುತ್ತದೆ. ಕಾಲೇಜು ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳದಲ್ಲಿ 8-10 ಸಂಸ್ಥೆಗಳು ಭಾಗವಹಿಸಿವೆ’ ಎಂದು ತಿಳಿಸಿದರು.

ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಪ್ರೋ.ಶೋಭಾ ಜಿ. ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯನಿರ್ವಹಣಾ ನಿರ್ದೇಶಕಿ ಸುಮತಿ ಬಿ.ಎಸ್ ವರ್ಚುವಲ್ ಮಾತನಾಡಿದರು.

ಹಿರಿಯ ಪ್ರಾಧ್ಯಾಪಕ ಪ್ರಾಣೇಶ ಕುಲಕರ್ಣಿ, ಶಿವರಾಜಪ್ಪ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಚಂದ್ರಶೇಖರ ಸಜ್ಜನ, ಐಕ್ಯೂಎಸಿ ಸಂಚಾಲಕ ಮಹಂತೇಶ ಅಂಗಡಿ, ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಶಿವರಾಜ ಕೊಪ್ಪರ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.