
ಲಿಂಗಸುಗೂರು: ‘ಧರ್ಮ, ಜಾತಿ ಹೆಸರಿನಲ್ಲಿ ಸುಳ್ಳು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಈಗಾಗಿ ವಿದ್ಯಾರ್ಥಿ ಸಮುದಾಯ ಸಾಮಾಜಿಕ ಜಾಲತಾಣಗಳಿಂದ ದೂರ ಇರಬೇಕು’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದೆಲ್ಲಾ ಸತ್ಯವೆಂದು ಯುವ ಸಮುದಾಯ ದಾರಿ ತಪ್ಪುತ್ತಿದೆ. ಯುವಕರು ಜಾಗೃತರಾಗಬೇಕು, ಸದೃಢ ದೇಶ ಹಾಗೂ ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ’ ಎಂದರು.
‘ದೇಶದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಕುಸಿದಿದೆ. ವಿಶ್ವ ವಿದ್ಯಾಲಯಗಳ 100 ರ್‍ಯಾಂಕಿಂಗ್‌ನಲ್ಲಿ ದೇಶದ ಯಾವುದೇ ವಿವಿ ಇಲ್ಲ’ ಎಂದರು.
ಕಾನೂನು ವಿವಿ ನಿವೃತ್ತ ಉಪಕುಲಪತಿ ಡಾ.ಜೆ.ಎಸ್.ಪಾಟೀಲ, ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ ಆನ್ವರಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪುರ, ಆಡಳಿತಾಧಿಕಾರಿ ಬಸವಂತರಾಯ ಕುರಿ, ಪ್ರಾಚಾರ್ಯ ಬಸವಂತರಾಯ ಕುರಿ, ಕಣ್ಮೇಶ ಚಿತ್ತಾಪುರ, ಸೂಗುರೆಡ್ಡಿ ಮೇಟಿ, ಬಸವರಾಜ ಪಾಟೀಲ ಹಾಗೂ ಇನ್ನಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.