ADVERTISEMENT

ಸಿಂಧನೂರು: ತಂತ್ರಾಂಶ ಕೌಶಲ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 11:16 IST
Last Updated 13 ಜನವರಿ 2022, 11:16 IST
ಸಿಂಧನೂರಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಗ್ರಾಮ ಪಂಚಾಯಿತಿಗಳ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ಸಂತೆ ಕೌಶಲ್ಕರ್ ತಂತ್ರಾಂಶ ತರಬೇತಿ ಕಾರ್ಯಾಗಾರ ನಡೆಯಿತು
ಸಿಂಧನೂರಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಗ್ರಾಮ ಪಂಚಾಯಿತಿಗಳ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ಸಂತೆ ಕೌಶಲ್ಕರ್ ತಂತ್ರಾಂಶ ತರಬೇತಿ ಕಾರ್ಯಾಗಾರ ನಡೆಯಿತು   

ಸಿಂಧನೂರು: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಗ್ರಾಮ ಪಂಚಾಯಿತಿಗಳ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ಸಂತೆ ಕೌಶಲ್ಕರ್ ತಂತ್ರಾಂಶ ತರಬೇತಿ ಕಾರ್ಯಾಗಾರ ಗುರುವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಗ್ರಾಮೀಣ ಭಾಗದ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಸಂತೆ ಕೌಶಲ್ಕರ್ ಅಪ್ಲಿಕೇಶನ್ ಮೂಲಕ ಆನ್‍ಲೈನ್‍ನಲ್ಲಿ ಅಫ್‍ಡೇಟ್ ಮಾಡುವ ಕುರಿತು ತರಬೇತಿಯಲ್ಲಿ ತಿಳಿಸಿಕೊಡಲಾಗಿದೆ. ಇದೇ ರೀತಿ ಸ್ವಸಹಾಯ ಗುಂಪಿನ ಸದಸ್ಯರು ಉತ್ಪನ್ನಗಳನ್ನು ಹೆಚ್ಚೆಚ್ಚು ಅಫ್‍ಡೇಟ್ ಮಾಡಿ ಮಾರಾಟ ಮಾಡುವುದರಿಂದ ಅಧಿಕ ಲಾಭ ಪಡೆದು ಆರ್ಥಿಕ ಸಬಲೀಕರಣ ಹೊಂದಲು ಸಾಧ್ಯವಾಗುತ್ತದೆ ಎಂದು ತರಬೇತುದಾರ ರಮೇಶ ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪವನಕುಮಾರ ಮಾತನಾಡಿ, ಮಹಿಳೆಯರು ತಾಲ್ಲೂಕಿನಲ್ಲಿ ಉತ್ತಮವಾದ ಕೆಲಸಗಳನ್ನು ನಿರ್ವಹಿಸುವ ಮೂಲಕ ಆರ್ಥಿಕವಾಗಿ ಬಲಗೊಳ್ಳಬೇಕು ಎಂದು ಹೇಳಿದರು.

ADVERTISEMENT

ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ವೀರಭದ್ರಗೌಡ ಗಚ್ಚಿನಮನಿ, ವಲಯ ಮೇಲ್ವಿಚಾರಕರಾದ ಮೌನೇಶ, ಪ್ರಕಾಶ ಸೇರಿದಂತೆ ಸಿಂಧನೂರು ಮತ್ತು ಮಸ್ಕಿಯ ಪಂಚಾಯಿತಿ ಪ್ರತಿನಿಧಿಸುವ ಮುಖ್ಯಪುಸ್ತಕ ಬರಹಗಾರರು ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.