ADVERTISEMENT

ಗ್ರಾಮ ಸ್ವಚ್ಛತೆ ಕಾಪಾಡಲು ಮುಂದಾಗಿ: ಸಿಇಓ

ಕೆವಿಕೆ: ಮಹಿಳೆಯರಿಗೆ ಕಸ ವಿಲೇವಾರಿ ತರಬೇತಿ ಸಮರೋಪ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 15:32 IST
Last Updated 9 ಡಿಸೆಂಬರ್ 2021, 15:32 IST
ರಾಯಚೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಐದು ದಿನಗಳಿಂದ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಯ ತರಬೇತಿಯ ಸಮರೋಪ ಸಮಾರಂಭವು ಗುರುವಾರ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದರು
ರಾಯಚೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಐದು ದಿನಗಳಿಂದ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆಯ ತರಬೇತಿಯ ಸಮರೋಪ ಸಮಾರಂಭವು ಗುರುವಾರ ನಡೆಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಿದರು   

ರಾಯಚೂರು: ಕಸ ವಿಲೇವಾರಿ ತರಬೇತಿ ಪಡೆದ ಮಹಿಳೆಯರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲ ಗ್ರಾಮಗಳಲ್ಲಿ ಕಸ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಹೇಳಿದರು.

ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಹೊಸಪೇಟೆಯ ವಾಹಿನಿ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಸ್ವ-ಸಹಾಯ ಸಂಘದ ಸದಸ್ಯರಿಗೆ ಐದು ದಿನಗಳವರೆಗೂ ಆಯೋಜಿಸಿದ್ದ ಘನ ತ್ಯಾಜ್ಯ ನಿರ್ವಹಣೆಯ ತರಬೇತಿಯ ಸಮರೋಪ ಸಮಾರಂಭದಲ್ಲಿ ಗುರುವಾರ ಮಾತನಾಡಿದರು.

ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಮಾಡಿ, ಮಹಿಳಾ ಒಕ್ಕೂಟಗಳ ಗುಂಪಿನ ಸದಸ್ಯರಿಂದಲೇ ನಡೆಸಲು ನಿರ್ಧರಿಸಿದ್ದೇವೆ. ಮನೆ–ಮನೆಗಳಿಂದ ಕಸವನ್ನು ಸಂಗ್ರಹಿಸಿ, ವಿಂಗಡಿಸಿ, ಗೊಬ್ಬರ ಉತ್ಪಾದನೆ ಮಾಡಿ, ಮಾರಾಟ ಮಾಡುವವರೆಗೆ ಎಲ್ಲ ಕೆಲಸಗಳನ್ನು ಮಹಿಳೆಯರೇ ನಿರ್ವಹಣೆ ಮಾಡಲಿದ್ದಾರೆ ಎಂದರು.

ADVERTISEMENT

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ವತಿಯಿಂದ ಗ್ರಾಮ ಪಂಚಾಯಿತಿ. ಮಟ್ಟದಲ್ಲಿ ಸ್ವಚ್ಛ ಸಂಕೀರ್ಣ ಘಟಕದ ನಿರ್ವಹಣೆ ವಹಿಸಿಕೊಂಡಿದ್ದು, ಹೊರಗುತ್ತಿಗೆ ಆಧಾರದ ಮೇಲೆ ಅದಕ್ಕೆ ಸಿಬ್ಬಂದಿ ನೇಮಕ, ತರಬೇತಿ, ವೇತನ ನೀಡುತ್ತದೆ ಎಂದು ತಿಳಿಸಿದರು.
ತರಬೇತಿ ಪಡೆದ ಮಹಿಳೆಯರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಿಂದಲೂ ಕಸ ಸಂಗ್ರಹಿಸಿ ವಿಲೇವಾರಿ ಮಾಡಬೇಕು.ತರಬೇತಿ ಪಡೆದ ಮಹಿಳೆಯರಿಗೆ ₹6 ಸಾವಿರ ಗೌರವ ಧನ ನೀಡಲಾಗುತ್ತದೆ. ಕಸದಿಂದ ಬಂದ ಆದಾಯವನ್ನು ಸಿಬ್ಬಂದಿ, ವಾಹನ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮಡೋಳಪ್ಪ ಪಿ.ಎಸ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತರಬೇತಿಯಲ್ಲಿ ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳಿಂದ 34 ಮಹಿಳೆಯರು ಭಾಗವಹಿಸಿದ್ದರು. ತರಬೇತಿ ಪಡೆದ ಮಹಿಳೆಯರಿಗೆ ಸಿಇಓ ಹಾಗೂ ಪಿಡಿರವರು ಪ್ರಮಾಣ ಪತ್ರವನ್ನು ವಿತರಿಸಿದರು.

ಎನ್.ಆರ್.ಎಲ್.ಎಂ ವ್ಯವಸ್ಥಾಪಕ ವಿಜಯಕುಮಾರ, ಎಂಜಿಐಆರ್‌ಡಿ ಅಧಿಕಾರಿ ಗಣೇಶ್, ಸೇರಿದಂತೆ ಕೆವಿಕೆಯ ಅಧಿಕಾರಿಗಳು, ಮಹಿಳೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.