
ಪ್ರಜಾವಾಣಿ ವಾರ್ತೆ
ರಾಯಚೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹಾಗೂ ಡಿಎಆರ್ ಡಿವೈಎಸ್‌ಪಿ ಪ್ರಮಾನಂದ ಗೋಡ್ಕೆ ಇಲ್ಲಿಯ ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸ್ ಸಿಬ್ಬಂದಿಯಿಂದ ಜೈಲುವಾಸಿಗಳ ತಪಾಸಣೆ ಮಾಡಿಸಿದರು.
‘ಕಾನೂನುಬಾಹಿರ ವಸ್ತುಗಳನ್ನು ಇಟ್ಟುಕೊಳ್ಳಬಾರದು. ಮಾದಕ ವಸ್ತುಗಳ ಸೇವನೆ ಮಾಡಬಾರದು’ ಎಂದು ತಿಳಿವಳಿಕೆ ನೀಡಿದರು.
‘ಜೈಲಿನಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲನೆ ಮಾಡಬೇಕು’ ಎಂದು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅಧೀಕ್ಷಕಿ ಅನಿತಾ ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.