ADVERTISEMENT

’ಕ್ರೀಡೆಗಳಿಂದ ಸಾಮರ್ಥ್ಯ ವೃದ್ಧಿ’

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 13:40 IST
Last Updated 12 ಡಿಸೆಂಬರ್ 2019, 13:40 IST
ರಾಯಚೂರಿನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಚಾಲನೆ ನೀಡಿದರು
ರಾಯಚೂರಿನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಚಾಲನೆ ನೀಡಿದರು   

ರಾಯಚೂರು: ಸದಾ ಸಾರ್ವಜನಿಕರ ಆಸ್ತಿಪಾಸ್ತಿ ರಕ್ಷಣೆ ಮಾಡುವಲ್ಲಿ ನಿರತರಾಗಿರುವ ಪೊಲೀಸರ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದರು.

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಮೂರು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪೊಲೀಸರ ಆತ್ಮ ಸ್ಥೈರ್ಯ ಹೆಚ್ಚಿಸಿಕೊಳ್ಳಲು ಕ್ರೀಡೆಯಲ್ಲಿ ಭಾಗವಹಿಸುವುದು ಅತಿ ಅವಶ್ಯಕ. ಪೊಲೀಸ್ ಇಲಾಖೆ ಶಿಸ್ತಿನ ಸಿಪಾಯಿಯಾಗಿದ್ದು, ಸಮಾಜದಲ್ಲಿ ಪೊಲೀಸರ ಸಮವಸ್ತ್ರಕ್ಕೆ ಹೆಚ್ಚಿನ ಗೌರವ ನೀಡಲಾಗುತ್ತದೆ. ಘನತೆಗೆ ಧಕ್ಕೆಯಾಗದಂತೆ ಕಾರ್ಯ ನಿರ್ವಹಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು ಎಂದರು.

ADVERTISEMENT

ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವನೆ ಮೈಗೂಡಿಸಿಕೊಳ್ಳಬೇಕು, ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡೆಯಲ್ಲಿ ಪೊಲೀಸರು ಸಂತೋಷದಿಂದ ಭಾಗವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಮಾತನಾಡಿ, ಕ್ರೀಡೆ ಮಾನಸಿಕ, ದೈಹಿಕ ಸಾಮರ್ಥ್ಯ ಹೆಚ್ಚಿಸಲು ಸಹಕಾರಿಯಾಗಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕ್ರೀಡಕೂಟದಲ್ಲಿ ಪೊಲೀಸರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಸೂಕ್ತ ವೇದಿಕೆ ಕಲ್ಪಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಐಎಎಸ್ ಪ್ರೋಬೇಷನರಿ ಅಧಿಕಾರಿ ಯತೀಶ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.