ರಾಯಚೂರು: ಕೋವಿಡ್ ಹಿನ್ನೆಲೆಯಲ್ಲಿ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ಶ್ರೀಕೃಷ್ಣ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ.ನಾಯಕ ಅವರು ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ವೇಳೆ ಭಾರತೀಯ ರೆಡ್ ಕ್ರಾಸ್ ಶಿಕ್ಷಣ ಸಮಿತಿಯ ಜಿಲ್ಲಾ ಸಂಚಾಲಕದಂಡಪ್ಪ ಬಿರಾದಾರ್ ಅವರು ಮಾತನಾಡಿ, ಶ್ರೀಕೃಷ್ಣನ ಆದರ್ಶ ಹಾಗೂ ತತ್ವಗಳು ಇಂದಿಗೂ ಪ್ರಸ್ತುತ ಹೀಗಾಗಿ ನಾವೆಲ್ಲರೂ ಶ್ರೀಕೃಷ್ಣನ ಆದರ್ಶಗಳನ್ನು ಪಾಲಿಸಿಕೊಂಡು ಹೋದಲ್ಲಿ ಬದುಕು ಹಸನಾಗುತ್ತದೆ ಎಂದು ಹೇಳಿದರು.
ಯಾದವ್ ಸಮಾಜದ ಮುಖಂಡ ಹನುಮಂತಪ್ಪ ಯಾದವ, ತಿಮ್ಮಪ್ಪ ನಾಡಗೌಡ, ಡಿ.ಡಿ ವೆಂಕಟೇಶ, ಲಕ್ಷ್ಮಣ, ಮೂಕಪ್ಪ, ವಿರೇಶ, ತಿಕ್ಕಣ್ಣ, ಬಾಬು ಯಾದವ ಇದ್ದರು. ಈಚೆಗೆ ಗೌರವ ಡಾಕ್ಟರೇಟ್ ಪಡೆದ ಪ್ರೌಢ ಶಾಲಾ ಶಿಕ್ಷಕ ಹಾಗೂ ಭಾರತೀಯ ರೆಡ್ ಕ್ರಾಸ್ ಶಿಕ್ಷಣ ಸಮಿತಿಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ್ ಅವರಿಗೆ ಯಾದವ್ ಸಮಾಜ ವತಿಯಿಂದ ಸನ್ಮಾನ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.