ADVERTISEMENT

ರಾಯಚೂರು: ಮಾ.16ಕ್ಕೆ ರಾಜ್ಯ ಮಟ್ಟದ ಚಿತ್ರಸಂತೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2025, 13:59 IST
Last Updated 2 ಮಾರ್ಚ್ 2025, 13:59 IST
ರೇಖಾ ಬಡಿಗೇರ
ರೇಖಾ ಬಡಿಗೇರ   

ರಾಯಚೂರು: ಇಲ್ಲಿನ ಕಲಾ ಸಂಕುಲ ಸಂಸ್ಥೆ ವತಿಯಿಂದ ಮಾ.16ರಂದು ಬೆಳಿಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ರಾಜ್ಯಮಟ್ಟದ ನಾಲ್ಕನೇ ಚಿತ್ರಸಂತೆಯನ್ನು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷೆ ರೇಖಾ ಬಡಿಗೇರ ಹೇಳಿದರು.

ಮೂರು ಚಿತ್ರ ಸಂತೆಗಳನ್ನು ಉದ್ಯಾನದ ಬಳಿ ನಡೆಸಲಾಗಿತ್ತು. ಬಿಸಿಲಿನ ತಾಪ ಹೆಚ್ಚಿರುವುದರಿಂದ ಈ ಬಾರಿ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಚಿತ್ರಕಲಾವಿದರು ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬರಲಿದ್ದಾರೆ. ಅವರಿಗೆ ಶೌಚಾಲಯ, ಕುಡಿಯುವ ನೀರು, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಕಲ್ಯಾಣ ಕರ್ನಾಟಕದ ಭಾಗದ ಕಲಾವಿದರಿಗೆ ಅನುಕೂಲವಾಗಲೆಂದು ರಾಯಚೂರಿನಲ್ಲಿ ಚಿತ್ರಸಂತೆ ಆಯೋಜಿಸಲಾಗಿದೆ. ಗೋವಾ, ಮುಂಬೈ, ಕೋಲ್ಹಾಪುರ ಹಾಗೂ ರಾಜ್ಯದ ವಿವಿಧೆಡೆಯಿಂದ ಚಿತ್ರಕಲಾವಿದರು ಈ ಚಿತ್ರಸಂತೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ADVERTISEMENT

ಮಾ.10ರೊಳಗಾಗಿ ಆಸಕ್ತ ಚಿತ್ರಕಲಾವಿದರು ಅಮರಗೌಡ ಮೊ:8310235776, ಈರಣ್ಣ ಮೊ:9986724198 ಅವರನ್ನು ನೋಂದಣಿಗಾಗಿ ಸಂಪರ್ಕಿಸಬೇಕು ಎಂದು ತಿಳಿಸಿದರು.

ಕಲಾ ಸಂಕುಲ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ, ಚಿತ್ರಕಲಾವಿದ ಅಮರಗೌಡ, ಗಾಯಕಿ ಸಂತೋಷಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.