ADVERTISEMENT

‘ಕ್ರೀಡಾಕೂಟಗಳಿಂದ ಕ್ರೀಡಾಪಟುಗಳಿಗೆ ಸ್ಫೂರ್ತಿ’

ರಾಜಮಟ್ಟದ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ ಆರಂಭ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 16:08 IST
Last Updated 18 ಜನವರಿ 2023, 16:08 IST
ರಾಯಚೂರಿನ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಿಂದ ಏರ್ಪಡಿಸಿರುವ ಐದು ದಿನಗಳ ಕರ್ನಾಟಕ ರಾಜ್ಯ ಶ್ರೇಯಾಂಕ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು ಶಟಲ್‌ ಆಡುವ ಮೂಲಕ ಬುಧವಾರ ಉದ್ಘಾಟಿಸಿದರು.
ರಾಯಚೂರಿನ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಿಂದ ಏರ್ಪಡಿಸಿರುವ ಐದು ದಿನಗಳ ಕರ್ನಾಟಕ ರಾಜ್ಯ ಶ್ರೇಯಾಂಕ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜು ಶಟಲ್‌ ಆಡುವ ಮೂಲಕ ಬುಧವಾರ ಉದ್ಘಾಟಿಸಿದರು.   

ರಾಯಚೂರು: ಹಿಂದುಳಿದ ರಾಯಚೂರು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ. ಇದರಿಂದ ಜಿಲ್ಲೆಯ ಕ್ರೀಡಾಪಟುಗಳಿಗೆ ಸ್ಫೂರ್ತಿ ದೊರೆಯುತ್ತದೆ ಎಂದು ಎಐಸಿಸಿ ಕಾರ್ಯದರ್ಶಿ ಎನ್‌.ಎಸ್‌.ಬೋಸರಾಜ ಹೇಳಿದರು.

ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷ್‌ನಿಂದ ಆಯೋಜಿಸಿರುವ ಐದು ದಿನಗಳ ಕರ್ನಾಟಕ ರಾಜ್ಯ ಶ್ರೇಯಾಂಕ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಹೆಸರು ಮಾಡಬೇಕು. ಈ ಮೂಲಕ ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ದೂರ ಮಾಡಬೇಕು. ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಆಗುವುದಕ್ಕೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದೆ ಎಂದರು.

ADVERTISEMENT

ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಏರ್ಪಡಿಸಲು ರಾಯಚೂರಿನಲ್ಲಿಯೂ ಉತ್ತಮ ಸೌಲಭ್ಯಗಳಿವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದ ಕ್ರೀಡಾಕೂಟ ಆಯೋಜಿಸುವುದಕ್ಕೆ ಇದು ಮಾದರಿಯಾಗಿದೆ ಎಂದು ಹೇಳಿದರು.

ನಗರಸಭೆ ಸದಸ್ಯ ಸಾಜೀದ್ ಸಮೀರ್, ಗುತ್ತಿಗೆದಾರ ಮುಜಿಬುದ್ದೀನ್, ಅಸೋಸಿಯೇಷನ್ ಅಧ್ಯಕ್ಷ ಕಿರಣ್ ಬೆಲ್ಲಂ, ಕಾರ್ಯದರ್ಶಿ ನಾಗರಾಜ ಗಡ್ಡಾಳೆ, ಪದಾಕಾರಿಗಳಾದ ಜಯಪ್ರಕಾಶರೆಡ್ಡಿ, ಬಸವರಾಜ ಪಾಟೀಲ್ ಅತ್ತನೂರು ಮತ್ತಿತರರು ಇದ್ದರು.

395 ಆಟಗಾರರು ಭಾಗಿ: ರಾಜ್ಯಮಟ್ಟದ ಈ ಪಂದ್ಯಾವಳಿಯಲ್ಲಿ 395 ಆಟಗಾರರು ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದಾರೆ. 19 ವರ್ಷದೊಳಗಿನ ಮತ್ತು 19 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರು ಸಿಂಗಲ್ಸ್, ಡಬಲ್ಸ್‌ ಹಾಗೂ ಮಿಶ್ರ ಡಬಲ್ಸ್‌ನಲ್ಲಿ ಆಟವಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.