ADVERTISEMENT

ರಾಯಚೂರು | ‘ಸಂಖ್ಯಾಶಾಸ್ತ್ರದ ಪಾತ್ರ ಮುಖ್ಯವಾದುದು’

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 15:39 IST
Last Updated 30 ಜೂನ್ 2020, 15:39 IST
ರಾಯಚೂರಿನ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 14ನೇ ಸಾಂಖ್ಯಿಕ ದಿನಾಚರಣೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಮಾತನಾಡಿದರು
ರಾಯಚೂರಿನ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ 14ನೇ ಸಾಂಖ್ಯಿಕ ದಿನಾಚರಣೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಮಾತನಾಡಿದರು   

ರಾಯಚೂರು: ಸಂಖ್ಯಾಶಾಸ್ತ್ರ ಮಹತ್ವದ ಬಗ್ಗೆ ಮೊಟ್ಟಮೊದಲ ಬಾರಿಗೆ ಪ್ರಕಾಶ್ ಚಂದ್ರ ಮಹಲಾನೋಬಿಸ್ ತಿಳಿಸಿಕೊಟ್ಟರು. ಪ್ರಪಂಚಕ್ಕೆ ಸೊನ್ನೆ (ಶೂನ್ಯ) ಕೊಟ್ಟ ಭಾರತೀಯರು ಸಂಖ್ಯಾ ಶಾಸ್ತ್ರದ ಬೆಳೆವಣಿಗೆಗೆ ಕಾರಣರಾದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಹೇಳಿದರು.

ನಗರದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅವರ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ 14ನೇ ಸಾಂಖ್ಯಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಯಾವುದೇ ಪ್ರದೇಶದ ಅಭಿವೃದ್ಧಿಗೆ ಅಲ್ಲಿನ ಅಂಕಿ-ಸಂಖ್ಯೆಗಳ ಪಾತ್ರ ಅತ್ಯಂತ ಮುಖ್ಯವಾಗಿರುತ್ತದೆ. ಅಲ್ಲಿನ ಜಮೀನು, ಬೆಳೆ ಪ್ರದೇಶ, ಜಾನುವಾರುಗಳ ಅಂಕಿ-ಸಂಖ್ಯೆಗಳನ್ನು ಗಮನಿಸಬಹುದು ಎಂದರು.

ADVERTISEMENT

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಪ್ರಾಣೇಶ ಕುಲಕರ್ಣಿ ಉಪನ್ಯಾಸ ನೀಡಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಸ್.ಎಸ್. ಅಬೀದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ., ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಎಚ್.ಮುಲ್ಲಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರಾಜೇಶ ಬಿ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ತಿಪ್ಪಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.