ರಾಯಚೂರು: ತಾಲ್ಲೂಕಿನ ಮರ್ಚಟಾಳ ಗ್ರಾಮದ ಬೀದಿಯಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ 10-12 ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿದ್ದು, ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
9 ವರ್ಷದ ಚೈತ್ರಾಳ ಕುತ್ತಿಗೆ, ಕಿವಿ, ಕೈಕಾಲು, ತೊಡೆಗಳಿಗೆ ಬಲವಾಗಿ ಕಚ್ಚಿವೆ. ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಪೋಷಕರು ಬಾಲಕಿಯನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಪಂಚಾಯಿತಿಯವರು ನಾಯಿಗಳನ್ನು ಹಿಡಿದು ಬೇರೆ ಕಡೆಗೆ ಸಾಗಿಸಬೇಕು. ಗ್ರಾಮದ ಮಕ್ಕಳ ರಕ್ಷಣೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.