
ಪ್ರಜಾವಾಣಿ ವಾರ್ತೆ
ಕವಿತಾಳ: ಬೀದಿ ನಾಯಿಗಳಿಗೆ ಮಾನವೀಯ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಆರಂಭಿಸಲಾಗಿದೆ. ದತ್ತು ಪಡೆಯಲು ಆಸಕ್ತ ಸಾರ್ವಜನಿಕರು ಹಾಗೂ ನೋಂದಾಯಿತ ಸ್ವಯಂ ಸೇವಾ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಜಸ್ ಪಾಲ್ ಸಿಂಗ್ ತಿಳಿಸಿದ್ದಾರೆ.
ನಾಯಿಗಳ ರಕ್ಷಣೆ, ಆರೈಕೆ, ಪ್ರಾಣಿ ಕಲ್ಯಾಣ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ ಬೀದಿ ನಾಯಿಗಳನ್ನು ದತ್ತು ಪಡೆಯಬಹುದು. ಅವುಗಳಿಗೆ ಸುರಕ್ಷಿತ ವಾಸಸ್ಥಳ, ಹಿಂಸೆ ನೀಡದಿರುವುದು, ಸಕಾಲದಲ್ಲಿ ಚಿಕಿತ್ಸೆ ಕೊಡಿಸುವುದು ಸೇರಿದಂತೆ ದತ್ತು ಪ್ರಕ್ರಿಯೆ ಎಬಿಸಿ ನಿಯಮಗಳ ಪ್ರಕಾರ ದತ್ತು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.