ADVERTISEMENT

ಕೊರೊನಾ: ಬೀದಿ ನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 10:55 IST
Last Updated 14 ಸೆಪ್ಟೆಂಬರ್ 2020, 10:55 IST
ಶಕ್ತಿನಗರ ಬಳಿಯ ಡಿ.ಯದ್ಲಾಪುರ ಗ್ರಾಮದಲ್ಲಿ ಕೊರೊನಾ ಜಾಗೃತಿ ಕುರಿತು ಬೀದಿನಾಟಕ ಪ್ರದರ್ಶನ ಕಾರ್ಯಕ್ರಮ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಘುಪತಿಗೌಡ ಅವರು ಉದ್ಘಾಟಿಸಿದರು
ಶಕ್ತಿನಗರ ಬಳಿಯ ಡಿ.ಯದ್ಲಾಪುರ ಗ್ರಾಮದಲ್ಲಿ ಕೊರೊನಾ ಜಾಗೃತಿ ಕುರಿತು ಬೀದಿನಾಟಕ ಪ್ರದರ್ಶನ ಕಾರ್ಯಕ್ರಮ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಘುಪತಿಗೌಡ ಅವರು ಉದ್ಘಾಟಿಸಿದರು   

ಶಕ್ತಿನಗರ: ಕೊರೊನಾ ಸೋಂಕಿನಿಂದಾಗಿ ಎಲ್ಲರ ಬದುಕು ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಎಚ್ಚರಿಕೆಯ ನಡೆ ಅಗತ್ಯ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ರಘುಪತಿಗೌಡ ಹೇಳಿದರು.

ರಾಯಚೂರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ದೇವಸೂಗೂರು ವಲಯದ ಮಹಿಳಾ ಜ್ಞಾನವಿಕಾಶ ಕಾರ್ಯಕ್ರಮದಡಿಯಲ್ಲಿ ಡಿ.ಯದ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕೊರೊನಾ ಜಾಗೃತಿ ಬೀದಿನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾರ್ವಜನಿಕ ಸ್ಥಳಗಳು ಹಾಗೂ ಮಾರುಕಟ್ಟೆಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು. ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೈಗಳ ಸ್ವಚ್ಛತೆಗೆ ಸ್ಯಾನಿಟೈಸರ್ ಬಳಸಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

ವೇದಿಕೆಯಲ್ಲಿ ಮುಖಂಡರಾದ ಸುರೇಶ ಚೋಟು, ಪ್ರಕಾಶಯ್ಯ ನಂದಿ, ರಂಗ ನಿರ್ದೇಶಕ ರಂಜಾನಸಾಬ್ ಉಳ್ಳಾಗಡ್ಡಿ, ಕಲಾವಿದ ವೆಂಕಟ ನರಸಿಂಹಲು, ರೋಟರಿ ಕ್ಲಬ್ ಕಾರ್ಯದರ್ಶಿ ಮಹೇಶ ಪೊಲೀಸ್ ಪಾಟೀಲ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ದೇವಸೂಗೂರು ವಲಯದ ಮೇಲ್ವಿಚಾರಕ ಅನಿಲಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ವೆಂಕಟಮಾಲ, ಸೇವಾ ಪ್ರತಿನಿಧಿಗಳು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.