
ಸಿಂಧನೂರು: ಇಲ್ಲಿನ ಹೋಲಿಫ್ಯಾಮಿಲಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯ ತಲೆ ಕೂದಲನ್ನು ಶಿಕ್ಷಕರು ಕತ್ತರಿಸಿ ಹಾಕಿದ ಘಟನೆ ಬುಧವಾರ ನಡೆದಿದೆ.
ಶಾಲೆಯ ಶಿಕ್ಷಕಿ, ಶಾಲೆಯ ಫಾದರ್ ಇಬ್ಬರು ಸೇರಿ ಮಹ್ಮದ್ ತಾಹೇರ್ ಎನ್ನುವ ವಿದ್ಯಾರ್ಥಿಯ ಕೂದಲು ಕತ್ತರಿಸಿದ್ದಾರೆ.
‘ನನ್ನ ಪುತ್ರನ ತಲೆ ಕೂದಲು ಕತ್ತರಿಸಿದ ಹಿನ್ನಲೆಯಲ್ಲಿ ಶಿಕ್ಷಕರನ್ನು ವಿಚಾರಿಸಲು ಹೋದಾಗ ಫಾದರ್ ಜ್ಞಾನಪ್ರಕಾಶ ಅವರು ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ವಿದ್ಯಾರ್ಥಿಯ ತಂದೆ ಮಹ್ಮದ್ ಮುಸ್ತಫಾ ಆರೋಪಿಸಿದ್ದಾರೆ.
ಅವಮಾನವೀಯ ಘಟನೆ ಬಗ್ಗೆ ಶಾಲಾ ಶಿಕ್ಷಕರು ಹಾಗೂ ಫಾದರ್ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪಾಲಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.