ADVERTISEMENT

ಕವಿತಾಳ: ಶಾಲಾ ಆವರಣದಲ್ಲಿ 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 7:52 IST
Last Updated 11 ಜುಲೈ 2022, 7:52 IST
   

ಕವಿತಾಳ:ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಸ್ಕಿ ತಾಲ್ಲೂಕಿನ ಡೊಣಮರಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಲಿಂಗಸೂಗುರು ತಾಲ್ಲೂಕಿನ ಆನ್ವರಿ ಗ್ರಾಮದ ಗಂಗಪ್ಪ ಮಲ್ಲಯ್ಯ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ,ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಮಸ್ಕಿ ತಾಲ್ಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬ್ಬಂಧಿಕರ ಮನೆಯಲ್ಲಿ ವಾಸವಿದ್ದ ಎನ್ನಲಾಗಿದೆ.

ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವುದಾಗಿ ಹೇಳಿ ಹೋದ ಬಾಲಕ ಡೊಣಮರಡಿ ಸರ್ಕಾರಿ ಶಾಲಾ ಆವರಣದಲ್ಲಿನ ಗಿಡಕ್ಕೆ ನೇಣು ಹಾಕಿಕೊಂಡಿದ್ದಾನೆ.

ADVERTISEMENT

ಘಟನಾ ಸ್ಥಳಕ್ಕೆ ಕವಿತಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.