ADVERTISEMENT

ರಾಯಚೂರು | ಮಂತ್ರಾಲಯದಲ್ಲಿ ಬೋಸರಾಜುಗೆ ಶ್ರೀಗಳಿಂದ ಸನ್ಮಾನ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2025, 14:45 IST
Last Updated 2 ಮಾರ್ಚ್ 2025, 14:45 IST
ಗುರು ವೈಭವೋತ್ಸವದ ಪ್ರಯುಕ್ತ ಮಂತ್ರಾಲಯ ಮಠದಲ್ಲಿ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಅವರನ್ನು ಸನ್ಮಾನಿಸಿದರು
ಗುರು ವೈಭವೋತ್ಸವದ ಪ್ರಯುಕ್ತ ಮಂತ್ರಾಲಯ ಮಠದಲ್ಲಿ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಸಣ್ಣ ನೀರಾವರಿ ಸಚಿವ ಎನ್‌.ಎಸ್.ಬೋಸರಾಜು ಅವರನ್ನು ಸನ್ಮಾನಿಸಿದರು   

ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ ಹಾಗೂ ರಾಯರ 404ನೇ ಪಟ್ಟಾಭಿಷೇಕ ಮಹೋತ್ಸವದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಮಂತ್ರಾಲಯ ಮಠಕ್ಕೆ ಭೇಟಿ ನೀಡಿದರು.

ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ಸಚಿವ ಎನ್‌.ಎಸ್.ಬೋಸರಾಜು ಅವರನ್ನು ಸನ್ಮಾನಿಸಿದರು. ನಂತರ ಸಚಿವರು ನಾಡಿನ ಸಮಸ್ತ ಜನರ ಒಳಿತಿಗಾಗಿ ಪ್ರಾರ್ಥಿಸಿದರು.

ಕಾಂಗ್ರೆಸ್ ಹಿರಿಯ ಮುಖಂಡರಾದ ಕೆ.ಶಾಂತಪ್ಪ, ಜಯಂತರಾವ್ ಪತಂಗೆ, ಜಿ.ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ನರಸಿಂಹಲು ಮಾದಗಿರಿ, ಬಸವರಾಜ ಪಾಟೀಲ, ಗೋಪಾಲ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.