ಮಂತ್ರಾಲಯ (ರಾಯಚೂರು): ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಬುಧವಾರ ಅಶ್ವವಾಹನೋತ್ಸವ, ಸುಜ್ಞಾನೇಂದ್ರ ತೀರ್ಥರ ಆರಾಧನೆ ನಡೆಯಿತು.
ಬೆಳಿಗ್ಗೆ ಮೂಲರಾಮದೇವರಿಗೆ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಶ್ರೀರಂಗಂನ ವಿದ್ವಾನ್ ರಾಮಾಚಾರ ಪ್ರವಚನ ನೀಡಿದರು.
ಗುರುವಾರ ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯ ವಿದ್ವಾನ್ ನರಹರಿ ಆಚಾರ್ ವಾಳ್ವೆಕರ್ ಪ್ರವಚನ ನೀಡಲಿದ್ದಾರೆ. ಸಂಜೆ 5.30ಕ್ಕೆ ಬೆಂಗಳೂರಿನ ಎನ್.ಎಸ್.ಪ್ರಸಾದ ಮ್ಯಾಂಡೋಲಿನ್ ನುಡಿಸಲಿದ್ದಾರೆ. ಪುಣೆಯ ಆನಂದ ಭೀಮಸೇನ ಜೋಶಿ ಹಿಂದೂಸ್ತಾನಿ ಸಂಗೀತ ಪ್ರಸ್ತುತ ಪಡಿಸುವರು. ಚೆನ್ನೈನ ಚಿತ್ರಮಯ ನೃತ್ಯ ಶಾಲೆಯ ಕಲಾವಿದರು ಭರತ ನಾಟ್ಯ ಪ್ರದರ್ಶಿಸಲಿದ್ದಾರೆ. ರಾತ್ರಿ 8 ಗಂಟೆಗೆ ಸಪ್ತ ರಾತ್ರೋತ್ಸವ ಸಮಾರೋಪಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.