ADVERTISEMENT

ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ನಮಗೆ ನ್ಯಾಯ ಸಿಗಲಿದೆ: ಅನರ್ಹ ಶಾಸಕ ಪ್ರತಾಪಗೌಡ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2019, 11:25 IST
Last Updated 28 ಅಕ್ಟೋಬರ್ 2019, 11:25 IST
   

ಮಸ್ಕಿ: ’ನನ್ನನ್ನು ಸೇರಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ 17 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ಆದೇಶದ ವಿರುದ್ಧ ಸುಪ್ರಿಂ ಕೋರ್ಟ್‌ನಲ್ಲಿವಿಚಾರಣೆ ಮುಗಿದಿದ್ದು ನ. 5 ಅಥವಾ 6 ರಂದು ತೀರ್ಪು ಹೊರ ಬರುವ ನಿರೀಕ್ಷೆ ಇದೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಸೋಮವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಸ್ವ ಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದೇವೆ. ನಮ್ಮ ರಾಜೀನಾಮೆ ಅಂಗೀಕರಿಸದ ಸ್ಪೀಕರ್ ಅವರು ನಮ್ಮನ್ನು ಶಾಸಕ ಸ್ಥಾನದಿಂದ ಆನರ್ಹಗೊಳಿಸಿದ್ದನ್ನು ಪ್ರಶ್ನಿಸಿ ನಾವು ಸುಪ್ರಿಂ ಮೆಟ್ಟಲು ಹೇರಿದ್ದೇವೆ. ನಮಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಉಪ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿರುವ ಆರ್. ಬಸನಗೌಡ ಅವರನ್ನು ಪಕ್ಷದ ವರಿಷ್ಠರು ಮನವೊಲಿಸುತ್ತಿದ್ದಾರೆ ಎಂದರು.

ADVERTISEMENT

ಹೈಕೋರ್ಟ್ ನಲ್ಲಿ ವಿರುದ್ಧ ಹಾಕಿರುವ ಪ್ರಕರಣ ಹಿಂದಕ್ಕೆ ಪಡೆಯುವಂತೆಯೂ ಆರ್. ಬಸನಗೌಡ ಅವರಿಗೆ ಪಕ್ಷದ ಮುಖಂಡರು ಈಗಾಗಲೇ ಸೂಚಿಸಿದ್ದಾರೆ ಎಂದರು.

ಬರುವ ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು.

ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.